ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ

7

ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ

Published:
Updated:
ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ

 

 

 

ನವದೆಹಲಿ, (ಪಿಟಿಐ): ಭ್ರಷ್ಟಾಚಾರವನ್ನು ಸಮರ್ಥವಾಗಿ ತಡೆಯಲು ~ಜನ ಲೋಕಪಾಲ್~  ಮಸೂದೆ ಅಂಗೀಕರಿಸಬೇಕೆಂದು ಆಗ್ರಹಿಸಿ ಭ್ರಷ್ಟಾಚಾರ ವಿರೋಧಿ ಚಳುವಳಿಯ ನೇತಾರ,  ಖ್ಯಾತ ಸಮಾಜ ಸೇವಕ,  ಅಣ್ಣಾ ಹಜಾರೆ ಅವರು ಮಂಗಳವಾರ ಇಲ್ಲಿ  ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.

ಮಹಾತ್ಮಾ ಗಾಂಧಿ ಅವರ ಸಮಾಧಿ ಸ್ಥಳ ರಾಜ್ ಘಾಟ್ ದಲ್ಲಿ ಮಹಾತ್ಮಾ ಗಾಂಧಿ ಅವರಿಗೆ ಗೌರವ ಸಲ್ಲಿಸಿ ಮೆರವಣಿಗೆಯಲ್ಲಿ ಬಂದ  ಅಣ್ಣಾ ಹಜಾರೆ ಅವರು,  ನಂತರ ಇಲ್ಲಿನ ಜಂತರ್ ಮಂತರ್ ದಲ್ಲಿ  ಉಪವಾಸ ಸತ್ಯಾಗ್ರಹ ಆರಂಭಿಸಿದರು.

ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ~ಭ್ರಷ್ಟಾಚಾರ ದೇಶದ ಒಂದು ದೊಡ್ಡ ಪಿಡುಗು. ಅದನ್ನು  ನಿಗ್ರಹಿಸಲು ಜನ ಲೋಕಪಾಲ್ ಮಸೂದೆಯನ್ನು ಅಂಗೀಕರಿಸಿ ಕಾನೂನು ರಚಿಸುವುದೊಂದೆ ಈಗ ಉಳಿದಿರುವ ಮಾರ್ಗ~ ಎಂದು ಪ್ರತಿಪಾದಿಸಿದರು.

ಸಾಮಾಜಿಕ ಕಳಕಳಿ ಹೊಂದಿರುವ ಖ್ಯಾತ ಸಾಮಾಜಿಕ ಹೋರಾಟಗಾರರಾದ  ಸ್ವಾಮಿ ಅಗ್ನಿವೇಶ್, ಕಿರಣ್ ಬೇಡಿ ಮತ್ತು ಸಂದೀಪ್ ಪಾಂಡೆ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry