ಬುಧವಾರ, ಜೂನ್ 16, 2021
22 °C

ಉಪ್ಪಾರ ಜಾತಿ ಪರಿಶಿಷ್ಟ ಪಂಗಡಕ್ಕೆ: ಸಿ.ಎಂ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉಪ್ಪಾರ ಜಾತಿಯನ್ನು ಪರಿಶಿಷ್ಟ ಪಂಗ­ಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸ­ಲಾ­ಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.ಕರ್ನಾಟಕ ರಾಜ್ಯ ಉಪ್ಪಾರ ಸಂಘವು ಹಮ್ಮಿ­ಕೊಂಡಿದ್ದ ರಾಜ್ಯ ಮಟ್ಟದ ಉಪ್ಪಾರ ಬೃಹತ್‌ ಸಮಾ­ವೇಶ­ವನ್ನು ಉದ್ಘಾಟಿಸಿ ಮಾತನಾಡಿದರು.ಜಾತಿ ಆಳವಾಗಿ ಬೇರು ಬಿಟ್ಟಿದ್ದು, ಹಿಂದುಳಿದ ಜಾತಿಗಳು ಹೆಚ್ಚೆಚ್ಚು ಸಮಾವೇಶಗಳನ್ನು ನಡೆಸುವ ಮೂಲಕ ಸರ್ಕಾರದ ಮೇಲೆ ಒಗ್ಗಟ್ಟಿನ ಒತ್ತಡ ತರಬೇಕು. ಆ ಮೂಲಕ ಸಮಸ್ಯೆಗಳನ್ನು ಪರಿಹರಿಸಿ­ಕೊ­ಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.ರಾಜ್ಯದ ನಾನಾ ಭಾಗಗಳಲ್ಲಿ ಉಪ್ಪಾರ ಸಮು­ದಾಯ ಹಂಚಿಹೋಗಿದ್ದು, ಈವರೆಗೆ ಕೇವಲ ಇಬ್ಬರು ಮಾತ್ರ ವಿಧಾನಸಭೆ ಪ್ರವೇಶಿಸಲು ಸಾಧ್ಯವಾಗಿದೆ. ಹಿಂದುಳಿದ ವರು ಮೇಲ್ಮಟ್ಟದಲ್ಲೂ ಚುನಾಯಿತ­ರಾಗ­ಬೇಕು. ಈ ಬಗ್ಗೆ ಹೆಚ್ಚಿನ ಚರ್ಚೆ ನಡೆಯಬೇಕು ಎಂದರು.ಪುರುಷೋತ್ತಮಾನಂದಪುರಿ ಸ್ವಾಮೀಜಿ ರಾಜ್ಯ­ದಲ್ಲಿ ಉಪ್ಪಾರರ ಸಂಖ್ಯೆ 40 ಲಕ್ಷಕ್ಕೂ ಮೀರಿದೆ. ಉಪ್ಪಾರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು, ಸಮು­ದಾಯ ಭವನ  ಹಾಗೂ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ₨5 ಕೋಟಿ ಮಂಜೂರು ಮಾಡಬೇಕು’ ಎಂದು ಮನವಿ­ ಮಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.