ಮಂಗಳವಾರ, ಮೇ 11, 2021
27 °C

ಉ.ಪ್ರದೇಶ ಚುನಾವಣೆ: ರಾಹುಲ್ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಳಪೆ ಸಾಧನೆಯಿಂದ ತೀವ್ರ ಆಘಾತಗೊಂಡಿರುವ ಕಾಂಗ್ರೆಸ್‌ಗೆ ಹೊಸ ಚೈತನ್ಯ ತುಂಬಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಗುರುವಾರ ಫಲಿತಾಂಶದ ವಿಶ್ಲೇಷಣೆ ಆರಂಭಿಸಿದ್ದಾರೆ.ಈ ವಿಶ್ಲೇಷಣೆಯಿಂದ ಬರುವ ಅಂಶಗಳನ್ನು ಗಮನದಲ್ಲಿಟ್ಟುಕೊಂಡು 2014ರ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ರಾಹುಲ್ ಯೋಜಿಸಿದ್ದಾರೆ.

ಎರಡು ದಿನಗಳ ಈ ಸಭೆಯಲ್ಲಿ ಶುಕ್ರವಾರ ಸಂಸದರು ಮತ್ತು  ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಶಾಸಕರನ್ನು ಆಹ್ವಾನಿಸಲಾಗಿದೆ.ರಾಜ್ಯದಲ್ಲಿ ಪಕ್ಷದ ಸೋಲಿನ ಹೊಣೆಯನ್ನು ತಾವೇ ಹೊತ್ತಿದ್ದ ರಾಹುಲ್, ಈ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಿದ್ದಾರೆ. ರಾಜ್ಯದಲ್ಲಿ ಪಕ್ಷದ ಉಸ್ತುವಾರಿಯೂ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಮತ್ತು ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಜವಾಬ್ದಾರಿ ಹೊಂದಿದ್ದ ಪಕ್ಷದ ಹಿರಿಯ ಮುಖಂಡ ಮೋಹನ್ ಪ್ರಕಾಶ್ ಸಹ ಸಭೆಗೆ ಹಾಜರಾಗಿರಲಿಲ್ಲ.ಪಕ್ಷದ ಕಳಪೆ ಸಾಧನೆಯಿಂದ ತಮ್ಮ ವರ್ಚಸ್ಸು ಕಡಿಮೆಯಾಗಿದೆ ಎಂಬ ಕೆಲ ಕಾಂಗ್ರೆಸ್ ಮುಖಂಡರ ಆರೋಪ ತೊಡೆದುಹಾಕಲು ಸಹ ರಾಹುಲ್ ಈ ಸಭೆಯನ್ನು ಬಳಸಿಕೊಳ್ಳಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.