ಗುರುವಾರ , ಮೇ 6, 2021
26 °C

ಉ.ಪ್ರ ಚುನಾವಣೆ: ರಾಹುಲ್ ವಿಶ್ಲೇಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಪಿಟಿಐ): ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿರುವುದಕ್ಕೆ ಕಾರಣಗಳೇನು ಎನ್ನುವುದರ ಕುರಿತು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿಶ್ಲೇಷಣೆ ನಡೆಸಲಿದ್ದಾರೆ.

ಶುಕ್ರವಾರದಂದು (ಏ. 6) ನಡೆಯಲಿರುವ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಅವರು ಈ ವಿಶ್ಲೇಷಣೆ ನಡೆಸಲಿದ್ದು, ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಪಕ್ಷ ಬಲವರ್ಧನೆಗೂ ಅವರು ಸಲಹೆ- ಸೂಚನೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶ ಚುನಾವಣೆಯ ಉಸ್ತುವಾರಿ ಹೊತ್ತಿದ್ದ ರಾಹುಲ್ ಗಾಂಧಿ ಅವರು ಚುನಾವಣೆಯ ಫಲಿತಾಂಶದ ನಂತರ ಔಪಚಾರಿಕವಾಗಿ ಇದೇ ಮೊದಲ ಬಾರಿಗೆ ನಡೆಸುತ್ತಿರುವ ಈ ಸಭೆಯಲ್ಲಿ ಹೊಸದಾಗಿ ಚುನಾಯಿತರಾಗಿರುವ ಶಾಸಕರು, ಉತ್ತರ ಪ್ರದೇಶದ ಸಂಸದರು ಭಾಗವಹಿಸಲಿದ್ದಾರೆ.

ಚುನಾವಣೆಯಲ್ಲಿ 20 ಸಾವಿರಕ್ಕೂ ಹೆಚ್ಚು ಮತ್ತು ಕಡಿಮೆ ಅಂತರದಲ್ಲಿ ಠೇವಣಿ ಕಳೆದುಕೊಂಡು ಪರಭಾವಗೊಂಡ ಅಭ್ಯರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರು ಗುರುವಾರ ನಡೆಯುವ ಪೂರ್ವಭಾವಿ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

ರಾಹುಲ್ ಗಾಂಧಿ ಅವರೇ ಮುಂಚೂಣಿಯಲ್ಲಿ ನಿಂತು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರೂ ವಿಧಾನಸಭೆಯ ಒಟ್ಟು 403 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿದ್ದು ಕೇವಲ 28 ಸ್ಥಾನಗಳಲ್ಲಿ ಮಾತ್ರ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.