ಸೋಮವಾರ, ಏಪ್ರಿಲ್ 19, 2021
32 °C

ಉಪ ಚುನಾವಣೆ ಫಲಿತಾಂಶ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ 20 ಸ್ಥಾನಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶ ಬುಧವಾರ ಪ್ರಕಟವಾಗಿದೆ.ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 15 ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಪಕ್ಷೇತರರು ಜಯ ಗಳಿಸಿದ್ದಾರೆ. ಉಳಿದಂತೆ ಬಿಜೆಪಿ ನಾಲ್ಕು, ಜೆಡಿಎಸ್ ಮೂರು ಮತ್ತು ಕಾಂಗ್ರೆಸ್ ಎರಡು ಸ್ಥಾನಗಳನ್ನು ಗಳಿಸಿವೆ.ಜಿಲ್ಲಾ ಪಂಚಾಯಿತಿಯ ಎರಡು ಸ್ಥಾನಗಳ ಪೈಕಿ ಬಿಜೆಪಿ, ಕಾಂಗ್ರೆಸ್ ತಲಾ ಒಂದು ಸ್ಥಾನ ಗಳಿಸಿವೆ. ತಾಲ್ಲೂಕು ಪಂಚಾಯಿತಿಯ ಮೂರು ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಎರಡು ಪಡೆದಿದೆ. ಬಿಜೆಪಿ ಒಂದು ಸ್ಥಾನ ಗಳಿಸಿದೆ. ಒಟ್ಟಾರೆ ಬಿಜೆಪಿ ಆರು, ಕಾಂಗ್ರೆಸ್ ಐದು ಮತ್ತು ಜೆಡಿಎಸ್ ಮೂರು ಸ್ಥಾನಗಳನ್ನು ಗಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.