ಮಂಗಳವಾರ, ಮೇ 18, 2021
31 °C

ಉಪ ಚುನಾವಣೆ: ಮತ ಯಂತ್ರಗಳ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಎಲೆಕ್ಟ್ರಾನಿಕ್ ಮತ ಯಂತ್ರಗಳು, ಚುನಾವಣಾ ಸಾಮಗ್ರಿ ಹಂಚಿಕೆ ಕಾರ್ಯ ಭಾನುವಾರ ಇಲ್ಲಿನ ಗವಿಸಿದ್ದೇಶ್ವರ ಪದವಿ ಕಾಲೇಜಿನಲ್ಲಿ ನಡೆಯಿತು.ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಉಸ್ತುವಾರಿಯಲ್ಲಿ ಚುನಾವಣಾ ಸಿಬ್ಬಂದಿಗೆ ಈ ಸಾಮಗ್ರಿ ವಿತರಣೆ ನಡೆಯಿತು.ಈ ಸಂದರ್ಭದಲ್ಲಿ `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಒಟ್ಟು 210 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು. ಈ ಪೈಕಿ 94 ಮತದಾನ ಕೇಂದ್ರಗಳನ್ನು ಅತಿಸೂಕ್ಷ್ಮ, 65 ಸೂಕ್ಷ್ಮ ಹಾಗೂ 51 ಸಾಮಾನ್ಯ ಎಂದು ವಿಂಗಡಿಸಲಾಗಿದೆ ಎಂದರು.ವಿವಿಧ ಹಂತದಲ್ಲಿ 840 ಹಾಗೂ ಶೇ 10ರಷ್ಟು ಕಾಯ್ದಿರಿಸಿದ ಸಿಬ್ಬಂದಿ ಸೇರಿದಂತೆ ಈ ಉಪ ಚುನಾವಣೆಯಲ್ಲಿ ಒಟ್ಟು 924 ಜನ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದೆ. ಸಾರಿಗೆ ಸಂಸ್ಥೆಯ 25 ಬಸ್, 16 ಮ್ಯಾಕ್ಸಿಕ್ಯಾಬ್, 72 ಜೀಪ್‌ಗಳು ಹಾಗೂ 1 ಲಾರಿಯನ್ನು ಚುನಾವಣಾ ಕಾರ್ಯಕ್ಕೆ ಬಳಸಲಾಗುತ್ತಿದೆ ಎಂದರು. 210 ಎಲೆಕ್ಟ್ರಾನಿಕ್ ಮತದಾನ ಯಂತ್ರಗಳಲ್ಲದೇ 21 ಯಂತ್ರಗಳನ್ನು ಕಾಯ್ದಿರಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.