ಉಪ ಮುಖ್ಯಮಂತ್ರಿ ಈಶ್ವರಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ

7

ಉಪ ಮುಖ್ಯಮಂತ್ರಿ ಈಶ್ವರಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ

Published:
Updated:
ಉಪ ಮುಖ್ಯಮಂತ್ರಿ ಈಶ್ವರಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು, (ಐಎಎನ್ಎಸ್) : ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ  ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಬೆಂಗಳೂರು ಮತ್ತು ಶಿವಮೊಗ್ಗದ ಮನೆ, ಕಛೇರಿ ಹಾಗೂ ಅವರಿಗೆ ಸಂಬಂಧಿಕರ ನಿವಾಸಗಳ ಮೇಲೆ ಲೋಕಾಯುಕ್ತ ಪೋಲಿಸರು ಸೋಮವಾರ ದಾಳಿ ಮಾಡಿದ್ದಾರೆ.

ವಕೀಲ ಬಿ. ವಿನೋದ್ ಅವರು ಶಿವಮೊಗ್ಗದ ಲೋಕಾಯುಕ್ತ ನ್ಯಾಯಲಯದಲ್ಲಿ ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ  ಈಶ್ವರಪ್ಪ ಅವರ ವಿರುದ್ದ ದೂರು ದಾಖಲಿಸಿದ್ದರು. ದೂರನ್ನು ಸ್ವೀಕರಿಸಿದ ಲೋಕಾಯುಕ್ತ ನ್ಯಾಯಲಯ ತನಿಖೆಗೆ ಆದೇಶಿಸಿತ್ತು.ನ್ಯಾಯಾಲಯದ ಆದೇಶದಂತೆ ಪ್ರಥಮ ತನಿಖಾ ವರದಿಯನ್ನು ದಾಖಲಿಸಿದ ಲೋಕಾಯುಕ್ತ ಪೋಲಿಸರು ಈ ದಾಳಿ ನಡೆಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry