ಶನಿವಾರ, ಮೇ 8, 2021
26 °C
ನಿಗಮ, ಮಂಡಳಿಗೆ ನೇಮಕ

ಉಪ ಸಮಿತಿ ರಚನೆಗೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಬರುವ ಜುಲೈನಲ್ಲಿ ಬಜೆಟ್ ಮಂಡಿಸಿದ ಬಳಿಕ ನಿಗಮ- ಮಂಡಳಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು `ಜನಪರ' ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಇದಾದ ತಕ್ಷಣ ನಿಗಮ, ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ರಾಜ್ಯ ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ಹೆಸರನ್ನು ಅಂತಿಮಗೊಳಿಸಲು ಉಪ ಸಮಿತಿಯೊಂದನ್ನು ರಚಿಸಲು ಸಿದ್ದರಾಮಯ್ಯ ಚಿಂತಿಸಿದ್ದಾರೆ. ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಮೊದಲು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ. ಜಿ. ಪರಮೇಶ್ವರ ಜತೆ ಸಮಾಲೋಚನೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಹಾಗೂ ಅಧ್ಯಕ್ಷರು ಉಪ ಸಮಿತಿ ಸದಸ್ಯರ ಹೆಸರು ಅಂತಿಮಗೊಳಿಸಿದ್ದಾರೆ.ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ಹಾಗೂ ಪಕ್ಷ ಸಂಘಟನೆಗಾಗಿ ದುಡಿಯುತ್ತಿರುವ ನಿಷ್ಠಾವಂತ ಕಾರ್ಯಕರ್ತರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ಸಿಗಲಿದೆ. ಮುಖ್ಯಮಂತ್ರಿ ತಮ್ಮ ಬಳಿ ಅನೇಕ ಇಲಾಖೆಗಳನ್ನು ಇಟ್ಟುಕೊಂಡಿದ್ದು, ಸದ್ಯಕ್ಕೆ ಸಂಪುಟ ವಿಸ್ತರಣೆ ಮಾಡುವ ಉದ್ದೇಶ ಹೊಂದಿಲ್ಲ ಎಂದು ಮೂಲಗಳು ಖಚಿತಪಡಿಸಿವೆ.ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸೃಷ್ಟಿಯಾಗಿರುವ ಕೆಲವು ಅನಗತ್ಯ ಹುದ್ದೆಗಳು ಹಾಗೂ ಆಯೋಗಗಳನ್ನು ರದ್ದು ಮಾಡಲು ಮುಖ್ಯಮಂತ್ರಿ ಚಿಂತಿಸಿದ್ದಾರೆ. ಈ ಹುದ್ದೆಗಳು ಹಾಗೂ ಆಯೋಗಗಳು ಸರ್ಕಾರಕ್ಕೆ `ಬಿಳಿಯಾನೆ' ಆಗಿವೆ ಎಂಬ ನಿಲುವನ್ನು ಸಿದ್ದರಾಮಯ್ಯ ಹೊಂದಿದ್ದಾರೆಂದೂ ಮೂಲಗಳು ಸ್ಪಷ್ಟಪಡಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.