ಬುಧವಾರ, ಮೇ 25, 2022
30 °C

ಉರ್ದು ಶಾಲೆಗೆ ಶಿಕ್ಷಕರ ಕೊರತೆ: ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ಶಾಲೆಗಳು ಪ್ರಾರಂಭವಾಗಿ ಒಂದೂವರೆ ತಿಂಗಳಾದರೂ ನಗರದ ಮಹಾತ್ಮ ಗಾಂಧಿ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಉರ್ದು ಮತ್ತು ಗಣಿತ ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.ಶಾಲೆಯಲ್ಲಿ ಸುಮಾರು 360 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 10ನೇ ತರಗತಿಯ 150 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆ ತೆಗೆದುಕೊಳ್ಳಲಿದ್ದಾರೆ. ಶೇಕಡಾ 50ಕ್ಕೂ ಹೆಚ್ಚು ಮುಸ್ಲಿಂ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಉರ್ದು ಭಾಷೆಗೆ ಶಿಕ್ಷಕರಿಲ್ಲದೆ ಎರಡು ತಿಂಗಳಿನಿಂದ ಪಾಠ- ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳ ಸಮಯ ಹಾಳಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಶಾಲೆಯಲ್ಲಿ 8, 9 ಮತ್ತು 10ನೇ ತರಗತಿಗಳಿಂದ 9 ವಿಭಾಗಗಳಿದ್ದು, ವಿಜ್ಷಾನ ಮತ್ತು ಗಣಿತಕ್ಕೆ ಇಬ್ಬರು ಶಿಕ್ಷಕರಿದ್ದಾರೆ. ವಿಜ್ಷಾನ ಮತ್ತು ಗಣಿತ ಶಿಕ್ಷಕರು ಬಹುತೇಕ ತರಗತಿಗಳನ್ನು ಸಂಯೋಜನೆ(ಕಂಬೈಂಡ್) ಮಾಡಿಕೊಂಡು ಪಾಠ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. 2 ವಿಭಾಗ ಸಂಯೋಜನೆ ಮಾಡಿ ತೆಗೆದುಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಸರಿಯಾಗಿ ಅರ್ಥವಾಗುವುದಿಲ್ಲ ಹಾಗೂ ಶಿಕ್ಷಕರಿಗೂ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳ ಪೋಷಕರು ದೂರಿದ್ದಾರೆ.ಆರ್ಥಿಕವಾಗಿ, ಸಾಮಾಜಿಕವಾಗಿ ಚೆನ್ನಾಗಿರುವ ಮಕ್ಕಳು ಅರ್ಹತೆಗೆ ತಕ್ಕಂತೆ ಖಾಸಗಿ ಶಾಲೆಗಳಿಗೆ ಸೇರಿಕೊಳ್ಳುತ್ತಾರೆ. ಸರ್ಕಾರಿ ಶಾಲೆಗೆ ಬರುವವರ ಪೈಕಿ ಬಹುತೇಕ ಮಕ್ಕಳು ಅಲ್ಪಸಂಖ್ಯಾತ, ಪರಿಶಿಷ್ಟಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದ ಬಡವರು. ಅಂತಹ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರೇ ಇಲ್ಲದಿದ್ದರೆ ಕಲಿಯುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಈ ಬಗ್ಗೆ ಗಮನಹರಿಸಿ ಶಿಕ್ಷಕರ ನಿಯೋಜನೆ ಮಾಡಬೇಕು. ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದರೆ ಶಾಲೆಗೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಪೋಷಕರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.