ಭಾನುವಾರ, ಮೇ 16, 2021
26 °C

ಉಳಿಯಾರು:ಶಿಲಾಮಯ ಗರ್ಭಗುಡಿ ಶಿಲಾನ್ಯಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರ್ವ: ಮಜೂರು ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ದೇವಿಯ ನೂತನ ಶಿಲಾಮಯ ಗರ್ಭಗುಡಿಗೆ ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮ ದರ್ಶಿ ಡಾ.ನಿ.ಬಿ.ವಿಜಯ ಬಲ್ಲಾಳ್ ಭಾನುವಾರ ಶಿಲಾನ್ಯಾಸ ನೆರವೇರಿಸಿದರು.ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮದ ಜನರೆಲ್ಲಾ ಭಕ್ತಿಪೂರ್ವಕವಾಗಿ ಪ್ರಾರ್ಥಿಸಿ ಗ್ರಾಮ ದೇವರ ದೇವಾಲ ಯದ ಜೀರ್ಣೋದ್ಧಾರಕ್ಕೆ ಮುಂದಾಗಿ ರುವುದು ಶ್ಲಾಘನೀಯ ಎಂದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಕೆ.ಪಿ.ಆಚಾರ್ಯ ಮಾತನಾಡಿ, ಇತಿಹಾಸ ಪ್ರಸಿದ್ಧ ಉಳಿಯಾರು ಶ್ರೀ ದುರ್ಗೆಯ ದೇವಾಲಯದ ಜೀರ್ಣೋದ್ಧಾರದ ಬಹುದೊಡ್ಡ ಕನಸು ಇದೀಗ ನನಸಾಗುವ ಹಂತದಲ್ಲಿದೆ ಎಂದರು.ಕ್ಷೇತ್ರದ ಪ್ರಧಾನ ಅರ್ಚಕ ಪಾದೂರು ಲಕ್ಷ್ಮೀನಾರಾಯಣ ತಂತ್ರಿ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಲೀಲಾಧರ್ ಶೆಟ್ಟಿ ಕರಂದಾಡಿ, ರವಿರಾಜ್ ಶೆಟ್ಟಿ ಪಂಜಿತ್ತೂರುಗುತ್ತು, ಡಾ.ಸುಶೀಲಾ ಯು.ಪಿ.ಉಪಾಧ್ಯಾಯ, ಕ್ಷೇತ್ರದ ಅರ್ಚಕ ಗುರುರಾಜ್ ಭಟ್, ವಾಸ್ತುತಜ್ಞ ಶಶಿಧರ್, ಸೋದೆ ಮಠದ ಪ್ರತಿನಿಧಿ ಮುರಳೀಧರ್, ಭಜನಾ ಮಂಡಳಿ ಅಧ್ಯಕ್ಷ ಸಂತೋಷ್ ಆಚಾರ್ಯ ಉಪಸ್ಥಿತರಿದ್ದರು.ದೇವಳ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಡಾ.ಯು.ಪಿ. ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಳಿಯಾರು ಮಲ್ಲಿಕಾರ್ಜುನ ರಾವ್ ಸ್ವಾಗತಿಸಿದರು. ನೀಲಾನಂದ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ನಾಗಭೂಷಣ್ ರಾವ್ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.