ಹುಬ್ಬಳ್ಳಿ: ಒಂದೆಡೆ ಭೀಕರ ಬರದ ಛಾಯೆ, ಇನ್ನೊಂದೆಡೆ ದಿನೇ ದಿನೇ ತೀವ್ರಗತಿಯಲ್ಲಿ ಏರುತ್ತಿರುವ ಉಷ್ಣಾಂಶ ಉತ್ತರ ಕರ್ನಾಟಕ ಭಾಗದ ಜನತೆಯ ನಿತ್ಯದ ಬದುಕನ್ನು ಹೈರಾಣಾಗಿಸಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಉಷ್ಣಾಂಶ ಸರಾಸರಿ 2.5 ಡಿಗ್ರಿ ಸೆಲ್ಸಿಯಸ್ನಿಂದ 3 ಡಿಗ್ರಿಯವರೆಗೆ ಹೆಚ್ಚಳಗೊಂಡಿದೆ ಎಂದು ಹವಾಮಾನ ಇಲಾಖೆ ವರದಿಗಳು ಹೇಳುತ್ತಿವೆ. ಬಿಸಿಲ ತಾಪಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಕೆರೆ-ಕೊಳ್ಳಗಳು ಬತ್ತಿಹೋಗಿವೆ. ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ.

ರಾಜ್ಯ ಹವಾಮಾನ ಇಲಾಖೆಯ ಮಾಹಿತಿಯನ್ವಯ ಏಪ್ರಿಲ್ 9ರಂದು ಧಾರವಾಡದಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದರೆ, ಗುಲ್ಬರ್ಗದಲ್ಲಿ ಅತಿ ಹೆಚ್ಚು 41.3 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆಯಲ್ಲಿ 41.0 ಹಾಗೂ ಬೀದರ್ನಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕಚೇರಿ ವೇಳೆ ಬದಲಾವಣೆ: ಬಿಜಾಪುರ, ಬಾಗಲಕೋಟೆ ಹಾಗೂ ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಾದ ಗುಲ್ಬರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಹಾಗೂ ಬೀದರ್ ಸೇರಿದಂತೆ 8 ಜಿಲ್ಲೆಗಳಲ್ಲಿ ಬಿಸಿಲ ಬೇಗೆಯ ಹಿನ್ನೆಲೆಯಲ್ಲಿ ಏ.1 ರಿಂದ ಸರ್ಕಾರಿ ಕಚೇರಿಗಳ ವೇಳಾಪಟ್ಟಿ ಬದಲಾಯಿಸಲಾಗಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30ರ ವರೆಗೆ ಕಾರ್ಯ ನಿರ್ವಹಿಸುತ್ತಿವೆ. ಬಿಸಿಲ ಝಳ ಹೆಚ್ಚಳಗೊಂಡಂತೆ ದನಗಳಲ್ಲಿ ಕಾಲುಬಾಯಿ ಬೇನೆ ಕೂಡ ತೀವ್ರಗೊಳ್ಳುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.