ಯಾದಗಿರಿ: ಸಣ್ಣ ಕೈಗಾರಿಕೆ ಸಚಿವನಾಗಿ ಒಳ್ಳೆಯ ಕೆಲಸ ಮಾಡಿದ ತೃಪ್ತಿ ಇದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ಶೇ 40 ರಷ್ಟು ಮಾತ್ರ ತೃಪ್ತಿಯಾಗಿದ್ದು, ಇನ್ನೂ ಶೇ 60 ರಷ್ಟು ಕೆಲಸ ಆಗಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ನರಸಿಂಹ ನಾಯಕ (ರಾಜುಗೌಡ) ಹೇಳಿದರು.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಿಲ್ಲೆಯ ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿಶೇಷ ಕಾಳಜಿ ತೋರುತ್ತಿದ್ದರೂ, ಅಗತ್ಯ ಅನುದಾನ ಬಿಡುಗಡೆಗೆ ವಿಳಂಬವಾಗುತ್ತಿದೆ. ರಾಜ್ಯ ಮಟ್ಟದ ಅಧಿಕಾರಿಗಳಿಂದ ಜಿಲ್ಲೆಗೆ ಅಗತ್ಯ ಸಹಕಾರ ಸಿಗುತ್ತಿಲ್ಲ. ಹೊಸ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಗಮನ ನೀಡುವುದು ಅತ್ಯವಶ್ಯಕವಾಗಿದೆ. ಆದರೂ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ. ತಮ್ಮ ಅತೃಪ್ತಿಯ ಬಗ್ಗೆ ಮುಖ್ಯಮಂತ್ರಿಗಳ ಬಳಿಯೂ ಪ್ರಸ್ತಾಪಿಸಿರುವುದಾಗಿ ತಿಳಿಸಿದರು.

ರೂ.300 ಕೋಟಿ ವಿಶೇಷ ಪ್ಯಾಕೇಜ್ನಲ್ಲಿ ಪ್ರತಿ ವರ್ಷ ಶೇ33 ರಷ್ಟು ಅನುದಾನದಂತೆ ಮೂರು ವರ್ಷಗಳಲ್ಲಿ ಸಂಪೂರ್ಣ ಅನುದಾನ ಬಿಡುಗಡೆ ಆಗಬೇಕು. ಆದರೆ ಈಗಲೂ ಅವಶ್ಯಕ ಅನುದಾನ ಸಿಕ್ಕಿಲ್ಲ. ಹಿಂದಿನ ಜಿಲ್ಲಾಧಿಕಾರಿಗಳು ಜಿಲ್ಲೆಯ ಜನಪ್ರತಿನಿಧಿಗಳ ಜೊತೆ ಸಮಾಲೋಚನೆ ನಡೆಸದೇ ಪ್ರಸ್ತಾವನೆ ಸಲ್ಲಿಸಿರುವುದೂ ಇದಕ್ಕೆ ಒಂದು ಕಾರಣ. ಇನ್ನೊಂದೆಡೆ ರಾಜ್ಯ ಮಟ್ಟದ ಅಧಿಕಾರಿಗಳು ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದಿನ ಸಂಪುಟ ಸಭೆಯಲ್ಲೂ ತಾವು ಈ ವಿಷಯ ಪ್ರಸ್ತಾಪಿಸಿದ್ದು, ನಾಳೆ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಅಗತ್ಯ ಅನುದಾನ ಬಿಡುಗಡೆ ಹಾಗೂ ಅಭಿವೃದ್ಧಿಗೆ ಅಧಿಕಾರಿಗಳ ಸ್ಪಂದನೆ ನೀಡಲು ಸೂಚಿಸುವುದಾಗಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭರವಸೆ ನೀಡಿದ್ದಾರೆ. ಈ ಬಾರಿ ಅಗತ್ಯ ಅನುದಾನ ಬಿಡುಗಡೆ ಆಗುವ ವಿಶ್ವಾಸವಿದೆ ಎಂದರು.

ಜಿಲ್ಲೆಗೆ ಬಿಡುಗಡೆಯಾಗುವ ಅನುದಾನದಲ್ಲಿ ಸುರಪುರ ಕ್ಷೇತ್ರಕ್ಕೆ ಹೆಚ್ಚಿನ ಹಂಚಿಕೆಯಾಗುತ್ತಿದೆ ಎಂದು ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಜಿಲ್ಲೆಯಲ್ಲಿ ಕೆಲಸ ಮಾಡಲಾಗುತ್ತಿದೆ. ರೂ. 300 ಕೋಟಿ ಅನುದಾನದಲ್ಲಿ ಶಹಾಪುರಕ್ಕೆ 36 ಕೋಟಿ, ಗುರುಮಠಕಲ್ ಕ್ಷೇತ್ರಕ್ಕೆ 18 ಕೋಟಿ, ಸುರಪುರಕ್ಕೆ 61 ಕೋಟಿ ಹಾಗೂ ಯಾದಗಿರಿ ಕ್ಷೇತ್ರಕ್ಕೆ 188 ಕೋಟಿ ಹಂಚಿಕೆಯಾಗಿದೆ.

ವಿಶೇಷ ಅಭಿವೃದ್ಧಿಗೆ ಬಿಡುಗಡೆಯಾದ ರೂ. 50 ಅನುದಾನದಲ್ಲೂ ಮೂರು ಕ್ಷೇತ್ರಗಳಿಗೆ ತಲಾ ರೂ.5 ಕೋಟಿ ನೀಡಲಾಗಿದ್ದು, ಯಾದಗಿರಿಗೆ ರೂ. 34 ಕೋಟಿ ನೀಡಲಾಗಿದೆ. ಶಾಸಕನಾಗಿದ್ದಾಗ ಸುರಪುರ ಕ್ಷೇತ್ರದ ಬಗ್ಗೆ ಹೆಚ್ಚಿನ ಒಲುವು ತೋರುತ್ತಿದುದು ಸತ್ಯ. ಆದರೆ ಸಚಿವನಾದ ನಂತರ ನಾನು ಇಡೀ ಜಿಲ್ಲೆಯ ಪ್ರತಿನಿಧಿ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದರು.

ಹೊಸ ತಗಾದೆ ಬೇಡ: ಹಲವು ದಶಕಗಳ ಹೋರಾಟದ ಫಲವಾಗಿ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲು ಸಂವಿಧಾನದ 371 ನೇ ಕಲಂಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಇಂತಹ ಸಂದರ್ಭದಲ್ಲಿ ವಿಜಾಪುರ ಜಿಲ್ಲೆಯನ್ನೂಇದರಡಿ ಸೇರಿಸುವುದು ಸರಿಯಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ, ಈ ಭಾಗದ ಜನರ ಆಶಯವನ್ನು ಮನವರಿಕೆ ಮಾಡಿಕೊಡುವುದಾಗಿ ತಿಳಿಸಿದರು.

ಈ ಭಾಗದ 6 ಜಿಲ್ಲೆಗಳನ್ನು ಸೇರ್ಪಡೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇದೀಗ ವಿಜಾಪುರ ಜಿಲ್ಲೆ ಸೇರ್ಪಡೆ ಮಾಡಲು ಹೊರಟರೆ ಮತ್ತೆ ಈ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆಗಳು ದಟ್ಟವಾಗಿದೆ. ಹೀಗಾಗಿ ವಿಜಾಪುರ, ಬಾಗಲಕೋಟೆ ಜಿಲ್ಲೆಗೆ ವಿಶೇಷ ಅನುದಾನ ಒದಗಿಸಲು ತಮ್ಮ ಅಭ್ಯಂತರವಿಲ್ಲ. ಹೋರಾಟಕ್ಕೆ ಪ್ರತಿಫಲ ಸಿಗುತ್ತಿರುವ ಸಂದರ್ಭದಲ್ಲಿ ಹೊಸ ತಗಾದೆ ಬೇಡ ಎಂಬುದು ತಮ್ಮ ಅಭಿಪ್ರಾಯ ಎಂದರು.

ಸಣ್ಣ ಕೈಗಾರಿಕೆ ಸಚಿವನಾಗಿ ಅಧಿಕಾರ ವಹಿಸಿಕೊಂಡು ವರ್ಷ ಕಳೆದಿದ್ದು, ಇಲಾಖೆ ಒಳ್ಳೆಯ ಸಾಧನೆ ಮಾಡಿದೆ. ಸಣ್ಣ ಕೈಗಾರಿಕೆಗಳಿಗೆ ಬಾಕಿ ಇದ್ದ ಸಬ್ಸಿಡಿಯನ್ನು ನೀಡಲಾಗಿದೆ. ಈಗಾಗಲೇ ರೂ. 210 ಕೋಟಿ ಸಬ್ಸಿಡಿ ಹಣ ಬಿಡುಗಡೆ ಮಾಡಲಾಗಿದ್ದು, ಇನ್ನೂ ರೂ.110 ಕೋಟಿ ಬಾಕಿ ಇದೆ. ಶೀಘ್ರದಲ್ಲಿ ಈ ಹಣವನ್ನು ಬಿಡುಗಡೆ ಮಾಡಲಾಗುವುದು.

ಖಾದಿ ಗ್ರಾಮೋದ್ಯೋಗ ಮಂಡಳಿ ಪುನಶ್ಚೇತನಕ್ಕಾಗಿ ರೂ. 36 ಕೋಟಿ ಅನುದಾನ ನೀಡುವಂತೆ ಸಿಎಂಗೆ ಮನವಿ ಮಾಡಲಾಗಿದೆ. ಇಲಾಖೆ ವ್ಯಾಪ್ತಿಯ ಬಹುತೇಕ ಎಲ್ಲ ಉದ್ಯಮಗಳು ಲಾಭದಲ್ಲಿವೆ ಎಂದು ತಿಳಿಸಿದರು.

ಖಾದಿ ಗ್ರಾಮೋದ್ಯೋಗ ನೌಕರರ ವೇತನವನ್ನು ರೂ.150ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ರೂ.7 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಕೋರಲಾಗಿದೆ. ಗಾಂಧಿ ಜಯಂತಿಯ ಸಂದರ್ಭದಲ್ಲಿ ರಾಜ್ಯದ 32 ಸಾವಿರ ಖಾದಿ ಗ್ರಾಮೋದ್ಯೋಗ ನೌಕರರ ವೇತನ ಹೆಚ್ಚಳವಾಗಲಿದೆ ಎಂದು ತಿಳಿಸಿದರು.

ಸಿಐಡಿ ತನಿಖೆ ನಾಲ್ಕು ದಿನದಲ್ಲಿ ಪ್ರಾರಂಭ: ಸಾಹಿತಿ, ಪತ್ರಕರ್ತರ ಲಿಂಗಣ್ಣ ಸತ್ಯಂಪೇಟೆಯವರ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಈಗಾಗಲೇ ಸಿಐಡಿಗೆ ಒಪ್ಪಿಸಲಾಗಿದೆ. ತನಿಖೆಗಾಗಿ ಡಿಎಸ್ಪಿ ಅವರನ್ನು ನೇಮಕ ಮಾಡಲಾಗಿದೆ. ನಾಲ್ಕು ದಿನದಲ್ಲಿ ಸಿಐಡಿ ತನಿಖೆ ಆರಂಭವಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರವಾಗಿ ತಿಳಿಸಿದರು.

ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದರು.

ತೊಗರಿ ಮಂಡಳಿ ಅಧ್ಯಕ್ಷ ಡಾ. ವೆಂಕಟೇಶ ಗಡ್ಡಿಮನಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೇವಿಂದ್ರನಾಥ ನಾದ್ ಮುಂತಾದವರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.