ಶನಿವಾರ, ಜೂನ್ 19, 2021
26 °C

ಊಟ: ನೀತಿಸಂಹಿತೆ ಉಲ್ಲಂಘನೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಸೋಮವಾರ ಇಲ್ಲಿ ನಡೆದ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣಾ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡಿದ್ದ ಸುಮಾರು 300 ಕಾರ್ಯಕರ್ತರು ಹಾಗೂ ಪದಾಧಿಕಾರಿಗಳಿಗೆ ಮಧ್ಯಾಹ್ನ ಊಟದ ಏರ್ಪಾಟಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪಾಲಿಕೆ ಐದನೇ ವಲಯದ ಸಹಾಯಕ ಆಯುಕ್ತರ ನೇತೃತ್ವದ ನೀತಿ–ಸಂಹಿತೆ ನಿಗಾ ತಂಡ, ಅಲ್ಲಿನ ದೃಶ್ಯಾವಳಿಗಳನ್ನು ಚಿತ್ರೀಕರಿಸಿಕೊಂಡಿತು.ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಚುನಾವಣಾ­ಧಿಕಾರಿ ಆಗಿರುವ ಜಿಲ್ಲಾಧಿಕಾರಿ ಸಮೀರ್‌ ಶುಕ್ಲಾ, ‘ಅನುಮತಿ ಇಲ್ಲದೇ ಊಟ ಹಾಕುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಧಿಕಾರಿಗಳಿಗೆ ವರದಿ ನೀಡುವಂತೆ ತಿಳಿಸಿದ್ದೇನೆ. ವರದಿ ಬಂದ ನಂತರ ವಿವರಣೆ ನೀಡುವಂತೆ ಸಂಬಂಧಿ­ಸಿದವರಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಲಾಗುವುದು’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.