ಎಂಆರ್ಪಿಎಲ್ 3ನೇ ಘಟಕದಲ್ಲಿ ಸ್ಫೋಟ: ಒಂದು ಸಾವು
ಮಂಗಳೂರು: ಇಲ್ಲಿಗೆ ಸಮೀಪದ ತೋಕೂರಿನ ಎಂಆರ್ಪಿಎಲ್ ಮೂರನೇ ಘಟಕದಲ್ಲಿ ಮಂಗಳವಾರ ಮಧ್ಯಾಹ್ನ ಸ್ಫೋಟ ಸಂಭವಿಸಿ ಒಬ್ಬ ಗುತ್ತಿಗೆ ಕಾರ್ಮಿಕ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ.
ಮೃತನನ್ನು ಬಿಹಾರ ಮೂಲದ ಮುನ್ನಾ ಎಂದು ಗುರುತಿಸಲಾಗಿದೆ. ಬೀದರ್ನ ರಹೀಂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಿಬ್ಬರನ್ನು ಸುರತ್ಕಲ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಮಗಾರಿಯ ಗುತ್ತಿಗೆ ಪಡೆದ ಆಪ್ಮೋರ್ ಕಂಪೆನಿಯ ಕಚ್ಚಾ ತೈಲದ ಟ್ಯಾಂಕರ್ಗೆ ಪೈಂಟಿಂಗ್ ಮಾಡುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.