ಚಾಮರಾಜನಗರ: ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಹಾಗೂ ರಾಜಕಾರಣಿಗಳು ನಾಡಿನ ಸಾರ್ವಭೌಮತ್ವಕ್ಕೆ ಧಕ್ಕೆ ತರುತ್ತಿದ್ದು, ಕೂಡಲೇ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಸೋಮವಾರ ಜಿಲ್ಲಾ ಕನ್ನಡ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಎಂಇಎಸ್ ವಿರುದ್ಧ ಘೋಷಣೆ ಕೂಗಿದರು. ಬೆಳಗಾವಿಯನ್ನು `ಬೆಳಗಾಂವ್~ ಎಂದು ಬದಲಾಯಿಸುವಂತೆ ರಾಜ್ಯ ಸರ್ಕಾರಕ್ಕೆ ಗಡುವು ನೀಡಿರುವುದು ಖಂಡನೀಯ. ಜತೆಗೆ, ಕನ್ನಡ ನಾಮಫಲಕಗಳಿಗೆ ಮಸಿ ಬಳಿಯುತ್ತೇವೆಂದು ಹೇಳಿಕೆ ನೀಡಿದ್ದಾರೆ. ಕೂಡಲೇ, ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಎಂಇಎಸ್ ಕಾರ್ಯಕರ್ತರ ವರ್ತನೆ ಎಲ್ಲೆ ಮೀರಿದೆ. ಕನ್ನಡ ನಾಡಿನಲ್ಲಿಯೇ ನೆಲೆಯೂರಿ ನಾಡಿಗೆ ಅಪಮಾನ ಮಾಡುತ್ತಿದ್ದಾರೆ. ಕನ್ನಡಿಗರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳುವ ಬಗ್ಗೆ ಪಾಲಿಕೆಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಕೂಡಲೇ, ಕ್ಷಮೆಯಾಚಿಸ ದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಪದೇ ಪದೇ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿದ್ದಾರೆ. ರಾಜ್ಯ ಸರ್ಕಾರ ಹಾಗೂ ಬೆಳಗಾವಿ ಜಿಲ್ಲಾಡಳಿತ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಆದರೆ, ಮರಾಠಿಗರ ಓಟುಗಳಿಗಾಗಿ ಜನಪ್ರತಿನಿಧಿಗಳು ರಾಜ್ಯದ ಹಿತವನ್ನು ಬಲಿಕೊಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ದೂರಿದರು.

ಒಕ್ಕೂಟದ ಅಧ್ಯಕ್ಷ ಶಾ. ಮುರುಳಿ, ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ, ಚಾ.ವೆಂ. ರಾಜಗೋಪಾಲ್, ಚಾ.ಸಿ. ಸೋಮನಾಯಕ್, ಮಾರ್ಕೆಟ್ ಗಿರೀಶ್, ಗು. ಪರುಷೋತ್ತಮ್, ಸುರೇಶ್ನಾಯಕ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.