ಎಂಇಎಸ್ ಗಡೀಪಾರಿಗೆ ಆಗ್ರಹ

7

ಎಂಇಎಸ್ ಗಡೀಪಾರಿಗೆ ಆಗ್ರಹ

Published:
Updated:
ಎಂಇಎಸ್ ಗಡೀಪಾರಿಗೆ ಆಗ್ರಹ

ಕೊಪ್ಪಳ: ಕನ್ನಡ ರಾಜ್ಯೋತ್ಸವದಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರ ಪ್ರದರ್ಶಿಸಿದ ಕನ್ನಡ ವಿರೋಧಿ ವರ್ತನೆಯನ್ನು ಖಂಡಿಸಿ ನಗರದಲ್ಲಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಸಮಿತಿಯ ಭೂತ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.ನಗರದ ಮುಂಡರಗಿ ಭೀಮಜ್ಜ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು, ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ವಿರುದ್ಧ ಘೋಷಣೆ ಕೂಗಿದರು.ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಪದೇಪದೇ ಕನ್ನಡಿಗರಿಗೆ ನೋವುಂಟು ಮಾಡುತ್ತಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮಂದಾ ಬಾಳೇಕುಂದ್ರ್ರಿ ಹಾಗೂ ಉಪಮೇಯರ್ ರೇಣು ಕಿಲ್ಲೇಕರ ಸಹ ಕನ್ನಡಿಗರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಸಹ ಪ್ರತಿಭಟನಾಕಾರರು ಖಂಡಿಸಿದರು.ತಕ್ಷಣವೇ ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್‌ಸೀಡ್ ಮಾಡಬೇಕು ಹಾಗೂ ಸಮಿತಿಯ ಕಾರ್ಯಕರ್ತರನ್ನು ಗಡೀಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ವೇದಿಕೆಯ ನಗರ ಘಟಕದ ಅಧ್ಯಕ್ಷ ಶಿವಶರಣಪ್ಪ ಚಂದನಕಟ್ಟಿ, ಗವಿಸಿದ್ದಪ್ಪ ಕರ್ಕಿಹಳ್ಳಿ, ಬಾಷಾ ಹಿರೇಮನಿ, ಅಶೋಕ ಕಂಬಳಿ, ವಿದ್ಯಾರ್ಥಿ ಘಟಕದ ತಾಲ್ಲೂಕು ಅಧ್ಯಕ್ಷ ಬಿ.ಗಿರೀಶಾನಂದ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry