ಎಂಜಿನಿಯರಿಂಗ್ ಸಮ್ಮೇಳನಕ್ಕೆ ಚಾಲನೆ

ಗುರುವಾರ , ಮೇ 23, 2019
24 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಎಂಜಿನಿಯರಿಂಗ್ ಸಮ್ಮೇಳನಕ್ಕೆ ಚಾಲನೆ

Published:
Updated:

ಬೆಂಗಳೂರು: ಎಂ.ಎಸ್. ರಾಮಯ್ಯ ತಾಂತ್ರಿಕ ಕಾಲೇಜು ತನ್ನ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಮೂರು ದಿನಗಳ `ಎಂಜಿನಿಯರಿಂಗ್ ವ್ಯವಸ್ಥೆಯಲ್ಲಿನ ಅತ್ಯಾಧುನಿಕ ನಿಯಂತ್ರಣ ವಿಧಾನ~ ಕುರಿತ ರಾಷ್ಟ್ರೀಯ ಸಮ್ಮೇಳನಕ್ಕೆ ಗುರುವಾರ ಚಾಲನೆ ದೊರೆಯಿತು.  ಮುಖ್ಯ ಅತಿಥಿಯಾಗಿದ್ದ ಡಾ.ಎಸ್. ಶ್ರೀನಾಥ್‌ಕುಮಾರ್ ಸಮ್ಮೇಳನವನ್ನು ಉದ್ಘಾಟಿಸುವ ಮೂಲಕ `ವಿಮಾನ ನಿಯಂತ್ರಣ ಎಂಜಿನಿಯರಿಂಗ್‌ನಲ್ಲಿ ಆಧುನಿಕ ವಿಧಾನಗಳು~ ಕುರಿತು ಪ್ರಾಸ್ತಾವಿಕ ಭಾಷಣ ಮಾಡಿದರು. ಸಂಶೋಧಕರು, ಬೋಧಕರು ಹಾಗೂ ಕಲಿಕಾ ಸಮುದಾಯವನ್ನು ಒಂದೆಡೆ ಸೇರಿಸಿ ನೂತನ ಸಂಶೋಧನೆಯ ಫಲಿತಾಂಶ, ಭವಿಷ್ಯದ ಅಭಿವೃದ್ಧಿ ಹಾಗೂ ಎಂಜಿನಿಯರಿಂಗ್ ವ್ಯವಸ್ಥೆಯಲ್ಲಿನ ಅತ್ಯಾಧುನಿಕ ನಿಯಂತ್ರಣ ವಿಧಾನಗಳ ಸಮಸ್ಯೆಗಳ ಕುರಿತು ಚರ್ಚಿಸುವ ಉದ್ದೇಶದಿಂದ ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry