ಶನಿವಾರ, ಮೇ 21, 2022
20 °C

ಎಂಜಿನಿಯರ್ ಅಮಾನತ್ ಮಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು:  ತಾಲ್ಲೂಕಿನ ಪುರತಿಪ್ಲಿ ಗ್ರಾಮದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಸರ್ಕಾರದ ಸುತ್ತೋಲೆ ಹಾಗೂ ಸಮಾಜ ಕಲ್ಯಾಣ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಉದ್ದೇಶ ಸ್ಥಳದ ಬದಲಾಗಿ ಬೇರೊಂದು ಕಡೆ ಕಾಮಗಾರಿ ಕೈಗೊಳ್ಳಲಾಗಿದೆ. ಇದಕ್ಕೆ ಕಾರಣರಾದ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಅವರನ್ನು ಅಮಾನತ್ತುಗೊಳಿಸಬೇಕು ಎಂದು ಜಿಲ್ಲಾ ಹತ್ತಿ ಬೆಳೆಗಾರರ ಹೋರಾಟ ಸಮಿತಿ ಒತ್ತಾಯಿಸಿದೆ.ನಗರಕ್ಕೆ ಈಚೆಗೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರಿಗೆ ಸಮಿತಿ ಮನವಿ ಸಲ್ಲಿಸಿದೆ. ಈ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಸಿಸಿ ರಸ್ತೆ ಮಂಜೂರಾಗಿದೆ. ಆದರೆ, ಈ ಉದ್ದೇಶವನ್ನು ತಿರುಚಿ ಗ್ರಾಮದ ಹೊರ ವಲಯದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಆರೋಪಿಸಿದೆ.ಕಾಮಗಾರಿಗೆ ಬಿಲ್ ತಡೆಹಿಡಿಯಬೇಕು, ನಿಯಮ ಉಲ್ಲಂಘಿಸಿದ ಅಧಿಕಾರಿ ಯನ್ನು ಅಮಾನತ್ತುಗೊಳಿಸಬೇಕು, ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಅಧ್ಯಕ್ಷ ಎಸ್.ಪಿ.ಚನ್ನಯ್ಯ ನಾಯಕ,  ಪ್ರಧಾನ ಕಾರ್ಯದರ್ಶಿ ಎಂ.ಎಸ್ ಉರುಕುಂದಪ್ಪ ನಾಯಕ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.