ಶುಕ್ರವಾರ, ಜನವರಿ 24, 2020
21 °C

ಎಂಟನೇ ಸ್ಥಾನಕ್ಕೆ ಕುಸಿದ ಸೈನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ/ಐಎಎನ್‌ಎಸ್‌): ಲಂಡನ್‌ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್‌ ವಿಶ್ವ ಬ್ಯಾಡ್ಮಿಂಟನ್‌ ರ್‍ಯಾಂಕಿಂಗ್‌ನಲ್ಲಿ ಎಂಟನೇ ಸ್ಥಾನಕ್ಕೆ ಕುಸಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸತತ ವೈಫಲ್ಯ ಕಾಣುತ್ತಿರುವ ಅವರು ಈ ವರ್ಷ ಒಂದೂ ಪ್ರಶಸ್ತಿ ಜಯಿಸಿಲ್ಲ.ಸೈನಾ ಹೋದ ವರ್ಷ ಎರಡನೇ ಸ್ಥಾನಕ್ಕೇರಿದ್ದರು. ಆದರೆ ಈ ತಿಂಗಳ ಆರಂಭದಲ್ಲಿ ಆರನೇ ಸ್ಥಾನಕ್ಕೆ ಕುಸಿದಿದ್ದರು. ಈಗ ಮತ್ತೆ ಎರಡು ಸ್ಥಾನ ಕೆಳಗಿಳಿದಿದ್ದಾರೆ. ಇತ್ತೀಚೆಗೆ ಕ್ವಾಲಾಲಂಪುರದಲ್ಲಿ ನಡೆದ ಬಿಡಬ್ಲ್ಯುಎಫ್‌ ಸೂಪರ್‌ ಸರಣಿ ಫೈನಲ್ಸ್‌ ಟೂರ್ನಿಯ ಲೀಗ್‌ ಹಂತದಲ್ಲೇ ಸೋಲು ಕಂಡಿದ್ದರು.

ಪ್ರತಿಕ್ರಿಯಿಸಿ (+)