ಮಂಗಳವಾರ, ಮೇ 24, 2022
30 °C

ಎಂಪಿಎಂ ಅಭಿವೃದ್ಧಿಗೆ ಬದ್ಧ: ಮುಖ್ಯಮಂತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ)ನ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ವಿಚಾರಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಕೂಲಂಕಷವಾಗಿ ಚರ್ಚಿಸಿದ್ದಾರೆ.ಎಂಪಿಎಂ ಅಭಿವೃದ್ಧಿ ಮತ್ತು ಅದರ ಉಳಿಗೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ, ಯಾವುದೇ ಕಾರಣಕ್ಕೂ ಎಂಪಿಎಂನ್ನು ಬಿಎಫ್‌ಆರ್‌ಗೆ ಹಸ್ತಾಂತರಿಸುವುದಿಲ್ಲ. ಈ ಬಗ್ಗೆ ಯಾವುದೇ ಅಪಪ್ರಚಾರಕ್ಕೆ ಕಾರ್ಮಿಕರು ಕಿವಿಗೊಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.ಕಾರ್ಖಾನೆಯಲ್ಲಿನ ಮೆನರಿ ಲ್ಯಾಬ್, ಡಿ-ಇಂಕಿಂಗ್ ಪ್ಲಾಂಟ್ ಮುಂತಾದವುಗಳನ್ನು ಸಂಪೂರ್ಣ ಆಧುನೀಕರಣಗೊಳಿಸಲು ಒಪ್ಪಿಗೆ ನೀಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಮತ್ತು ರಾಜ್ಯಸಭೆ ಆಯನೂರು ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅದೇ ರೀತಿ, ವಿಐಎಸ್‌ಎಲ್ ಆಧುನೀಕರಣಕ್ಕೆ ಬೇಕಾದ ಎಲ್ಲ ರೀತಿಯ ಆರ್ಥಿಕ ನೆರವು ನೀಡಲು ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರ ್ಙ ಒಂದು ಸಾವಿರ ಕೋಟಿ ವೆಚ್ಚದಲ್ಲಿ ಮೈನಿಂಗ್‌ಗೆ ರಾಜ್ಯ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಮುಂದೆ ಬಂದಿದೆ. ಅದಕ್ಕೆ ಮುಖ್ಯಮಂತ್ರಿ ಒಪ್ಪಿಕೊಂಡಿದ್ದು, ಗಣಿ ಪ್ರದೇಶ ಒದಗಿಸುವ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ವಿಐಎಸ್‌ಎಲ್‌ಗೆ ಬೇಕಾದ ಗಣಿಗಾರಿಕೆ ಪರವಾನಗಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಲು ಸಹ ಮುಖ್ಯಮಂತ್ರಿ ಒಪ್ಪಿಕೊಂಡಿದ್ದು, ಸೂಕ್ತ ಸ್ಥಳ ಪರಿಶೀಲನೆ ಮಾಡಿ ಶಿಫಾರಸು ಮಾಡಲು ಕಂಪೆನಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.