ಮಂಗಳವಾರ, ಮೇ 17, 2022
26 °C

ಎಂಬಿಎ ಪದವೀಧರೆ ನೇಣಿಗೆ ಶರಣು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೀಣ್ಯ ಒಂದನೇ ಹಂತದಲ್ಲಿ ಶುಕ್ರವಾರ ಮಧು (28) ಎಂಬ ಎಂಬಿಎ ಪದವೀಧರೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯವರಾದ ಮಧು, ಅಕ್ಕ ಲತಾ ಜತೆ ಪೀಣ್ಯದಲ್ಲಿ ವಾಸವಾಗಿದ್ದರು. ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿರುವ ಲತಾ, ಶುಕ್ರವಾರ ಬೆಳಿಗ್ಗೆ ಏಳು ಗಂಟೆಗೆ ಕೆಲಸಕ್ಕೆ ಹೋಗಿದ್ದಾರೆ. ಆಗ ಮನೆಯಲ್ಲಿ ಒಬ್ಬರೇ ಇದ್ದ ಮಧು, ವೇಲ್‌ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ 7.15ರ ಸುಮಾರಿಗೆ ಮೃತರ ಅಕ್ಕ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.`ಒಂದೂವರೆ ತಿಂಗಳ ಹಿಂದೆ ಮಾವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಘಟನೆಯಿಂದ ಮಧು ಆಘಾತಕ್ಕೊಳಗಾಗಿದ್ದಳು. ಜತೆಗೆ, ಎಂಬಿಎ ಮತ್ತು ಕಾನೂನು ಪದವಿ ಮುಗಿಸಿದರೂ ಕೆಲಸ ಸಿಗಲಿಲ್ಲವೆಂಬ ಕೊರಗು ಆಕೆಯಲ್ಲಿತ್ತು. ಇದೇ ಹಿನ್ನೆಲೆಯಲ್ಲಿ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು' ಎಂದು ಲತಾ ತಿಳಿಸಿದರು. ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.