ಸೋಮವಾರ, ಜೂನ್ 14, 2021
28 °C

ಎಎಪಿ ಅಧಿಕಾರಕ್ಕೆ ಬಂದರೆ ಮಾಧ್ಯಮಗಳು ಜೈಲಿಗೆ; ಕೇಜ್ರಿವಾಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಗೆ ತಮ್ಮನ್ನು ಮಾರಿಕೊಂಡಿರುವ  ಮಾಧ್ಯಮದವರನ್ನು ಎಎಪಿ ಪಕ್ಷ ಅಧಿಕಾರಕ್ಕೆ ಬಂದರೆ ಜೈಲಿಗೆ ಕಳುಹಿಸಲಾಗುವುದು ಎಂದು ಅರವಿಂದ್‌ ಕೇಜ್ರಿವಾಲ್‌ ಗುಡುಗಿದ್ದಾರೆ.



ತಮ್ಮನ್ನು ಮಾರಿಕೊಂಡಿರುವ ಮಾಧ್ಯಮಗಳು ಮೋದಿಯ ಪ್ರಚಾರಕ್ಕೆ ವ್ಯಾಪಕ ಹಣವನ್ನು ಪಡೆದಿವೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅಂತಹವರ ವಿರುದ್ಧ ತನಿಖೆ ನಡೆಸಿ ಜೈಲಿಗೆ ಹಾಕಲಾಗುವುದು ಎಂದು ಕೇಜ್ರಿವಾಲ್ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.



ಕಳೆದ ಹತ್ತು ವರ್ಷಗಳಲ್ಲಿ ಗುಜರಾತ್‌ನಲ್ಲಿ ಸುಮಾರು 800 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಧ್ಯಮಗಳು ಇದನ್ನು ಬಿಂಬಿಸದೇ ಮೋದಿಯ ಚುನಾವಣಾ ಪ್ರಚಾರವನ್ನು ನೇರ ಪ್ರಸಾರ ಮಾಡುತ್ತಿವೆ ಎಂದು ಟಿವಿ ಚಾನಲ್‌ಗಳ ವಿರುದ್ಧ ಹರಿಹಾಯ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.