ಬುಧವಾರ, ಜುಲೈ 28, 2021
28 °C

ಎಐಇಇಇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಒಬ್ಬನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಲಖನೌ/ ನವದೆಹಲಿ (ಪಿಟಿಐ): ಉತ್ತರ ಪ್ರದೇಶದಲ್ಲಿ ಅಖಿಲ ಭಾರತ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯ (ಎಐಇಇಇ) ಪ್ರಶ್ನೆ ಪತ್ರಿಕೆಗಳು ಬಹಿರಂಗವಾದ ಪ್ರಕರಣದಲ್ಲಿ ಭಾಗಿಯಾಗಿದ್ದ ತಂಡವನ್ನು ಗುರುತಿಸಿರುವುದಾಗಿ ಉತ್ತರ ಪ್ರದೇಶದ ಪೊಲೀಸರು ಸೋಮವಾರ ತಿಳಿಸಿದ್ದಾರೆ.



ಘಟನೆ ಸಂಬಂಧ ಕಾನ್ಪುರದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಿ ವಿಚಾರಣೆಗಾಗಿ ಲಖನೌಗೆ ಕರೆ ತರಲಾಗಿದ್ದು ಆತನ ಗುರುತನ್ನು ಬಹಿರಂಗಪಡಿಸಿಲ್ಲ. ಇತರ ಕನಿಷ್ಠ ನಾಲ್ಕು ಮಂದಿಯನ್ನು ಕೂಡ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.  ಈ ತಂಡದ ಪ್ರಮುಖ ವ್ಯಕ್ತಿ ಮೂಲತಃ ಜೌನ್‌ಪುರ ಜಿಲ್ಲೆಯವನಾಗಿದ್ದು ಗಾಜಿಯಾಬಾದ್ ಮತ್ತು ಮುಂಬೈನಲ್ಲಿ ಬೇರೆ ಬೇರೆ ಹೆಸರಿನೊಂದಿಗೆ ನೆಲೆ ಕಂಡುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.