ನವದೆಹಲಿ: ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ಕಾಲೇಜುಗಳು ಎಂಬಿಎ ಮತ್ತು ಎಂಸಿಎ ಸ್ನಾತಕೋತ್ತರ ಕೋರ್ಸ್ಗಳನ್ನು ಆರಂಭಿಸಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಪೂರ್ವಾನುಮತಿ ಪಡೆಯುವುದು ಕಡ್ಡಾಯವಲ್ಲ ಎಂಬ ತನ್ನ ಈ ಮೊದಲಿನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ತಳ್ಳಿಹಾಕಿದೆ.

ಎಂಬಿಎ ಸ್ನಾತಕೋತ್ತರ ಪದವಿ ತಾಂತ್ರಿಕ ಕೋರ್ಸ್ ವ್ಯಾಪ್ತಿಗೆ ಒಳಪಡುವುದಿಲ್ಲ. ಎಂಸಿಎ ತಾಂತ್ರಿಕ ಕೋರ್ಸ್ ವ್ಯಾಪ್ತಿಗೆ ಒಳಪಟ್ಟರೂ ಎಐಸಿಟಿಇ ಕೇವಲ ಸಲಹೆಗಳನ್ನು ನೀಡಬಹುದೇ ಹೊರತು ಕೋರ್ಸ್ ಆರಂಭಿಸಲು ಅನುಮತಿ ಕಡ್ಡಾಯ ಅಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ಕಳೆದ ಏಪ್ರಿಲ್ನಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಈ ಆದೇಶವನ್ನು ಪ್ರಶ್ನಿಸಿ ಎಐಸಿಟಿಇ ಈ ಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ತಿರಸ್ಕರಿಸುವ ಮೂಲಕ ಸುಪ್ರೀಂಕೋರ್ಟ್ ತನ್ನ ಈ ಮೊದಲಿನ ಆದೇಶವನ್ನು ಎತ್ತಿ ಹಿಡಿದಿದ್ದು, ಎಐಸಿಟಿಇಗೆ ತೀವ್ರ ಹಿನ್ನಡೆಯಾಗಿದೆ.

ಆದರೆ, ಅದರ ಕಾನೂನು ಹೋರಾಟ ಇಲ್ಲಿಗೆ ಮುಕ್ತಾಯವಾಗಿಲ್ಲ. ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಲು ಕೊನೆಯ ಅವಕಾಶವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.