ಬುಧವಾರ, ಏಪ್ರಿಲ್ 14, 2021
24 °C

ಎಚ್‌ಆರ್‌ಸಿ ಸದಸ್ಯರ ನೇಮಕಾತಿ ರದ್ದತಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಮಾನವಹಕ್ಕುಗಳ ಆಯೋಗಕ್ಕೆ ನೇಮಿಸಿರುವ ಮೇಲ್ಜಾತಿಯ ಇಬ್ಬರೂ ಸದಸ್ಯರ ನೇಮಕಾತಿಯನ್ನು ಈ ಕೂಡಲೇ ರದ್ದುಗೊಳಿಸಬೇಕು' ಎಂದು ಕರ್ನಾಟಕ ರಾಜ್ಯ ದಲಿತ ಯುವ ಶಕ್ತಿಯ ಅಧ್ಯಕ್ಷ ರಾಜಶೇಖರ್ ಒತ್ತಾಯಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಮಾನವ ಹಕ್ಕುಗಳ ಆಯೋಗಕ್ಕೆ ದೇಶದ ಬೇರೆ ಎಲ್ಲ ರಾಜ್ಯಗಳಲ್ಲಿ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ  ಅಥವಾ ಹಿಂದುಳಿದ ವರ್ಗಗಳವರನ್ನು ಅಧ್ಯಕ್ಷರು ಅಥವಾ ಸದಸ್ಯರನ್ನಾಗಿ ನೇಮಿಸಿದ್ದಾರೆ. ಆದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಮೇಲ್ಜಾತಿಯವರನ್ನು ನೇಮಕ ಮಾಡಿ ದಲಿತರ ಸಾಮಾಜಿಕ ನ್ಯಾಯವನ್ನು ಕಿತ್ತುಕೊಂಡಿದೆ' ಎಂದು ಆರೋಪಿಸಿದರು.

`ಆಯೋಗಕ್ಕೆ ಸದಸ್ಯರು ಅಥವಾ ಅಧ್ಯಕ್ಷರನ್ನು ನೇಮಿಸಲು ಸಭೆ ಇರುತ್ತದೆ. ಆಯ್ಕೆ ಸಮಿತಿಯಲ್ಲಿ ಮುಖ್ಯಮಂತ್ರಿ, ಗೃಹಮಂತ್ರಿ, ವಿರೋಧ ಪಕ್ಷದ ನಾಯಕರು, ವಿಧಾನ ಸಭೆಯ ಅಧ್ಯಕ್ಷ ಮತ್ತು ವಿಧಾನ ಪರಿಷತ್ತಿನ ಸಭಾಪತಿ ಅವರು ಇರುತ್ತಾರೆ. ಆದರೆ, ಅವಸರದಲ್ಲಿ ಯಾವುದೇ ಸಭೆಯನ್ನು ಕರೆಯದೆ ಹೀಗೆ ಏಕಾಏಕಿ ನೇಮಿಸಿರುವುದು ಸರ್ಕಾರದ ದಲಿತ ವಿರೋಧಿ ನೀತಿಯನ್ನು ತೋರಿಸುತ್ತದೆ' ಎಂದರು.

`ಈ ನೇಮಕವನ್ನು ಈ ಕೂಡಲೇ ರದ್ದು ಪಡಿಸಬೇಕು. ಇಲ್ಲದಿದ್ದಲ್ಲಿ ಹುಬ್ಬಳ್ಳಿಯಲ್ಲಿರುವ ಮುಖ್ಯಮಂತ್ರಿಯವರ ಮನೆಯ ಮುಂದೆ ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆಯನ್ನು ಮಾಡಲಾಗುವುದು' ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.