ಎಚ್‌ಎಎಲ್ ಉಪ ವ್ಯವಸ್ಥಾಪಕ ಆತ್ಮಹತ್ಯೆ

7

ಎಚ್‌ಎಎಲ್ ಉಪ ವ್ಯವಸ್ಥಾಪಕ ಆತ್ಮಹತ್ಯೆ

Published:
Updated:

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಎಚ್‌ಎಎಲ್‌ನ ಉಪ ವ್ಯವಸ್ಥಾಪಕ ಆನಂದ್ (30) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್‌ಎಎಲ್ ಬಡಾವಣೆ ಸಮೀಪದ ಅನ್ನಸಂದ್ರ ಪಾಳ್ಯದಲ್ಲಿ ಗುರುವಾರ ನಡೆದಿದೆ.ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಅವರು ಪತ್ನಿಯೊಂದಿಗೆ ಅನ್ನಸಂದ್ರ ಪಾಳ್ಯದ ಕೃಷ್ಣ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಆನಂದ್ ಅವರ ಪತ್ನಿ ತವರು ಮನೆಗೆ ಹೋಗಿದ್ದರು. ಕೆಲಸ ಮುಗಿದ ನಂತರ ಕಚೇರಿಯಿಂದ ಸಂಜೆ ಐದು ಗಂಟೆ ಸುಮಾರಿಗೆ ಮನೆಗೆ ಬಂದ ಆನಂದ್ ಅವರು ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ. ರಾತ್ರಿ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.ಕೌಟುಂಬಿಕ ಕಲಹದಿಂದ ಬೇಸರಗೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಸಂಬಂಧಿಕರಿಗೆ ಒಪ್ಪಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎಚ್‌ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry