ಗುರುವಾರ , ಮೇ 19, 2022
21 °C

ಎಚ್‌ಐವಿ ತಡೆಗೆ ಜಾಗೃತಿ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಎಚ್‌ಐವಿ ತಡೆಗೆ ನಾಗರಿಕರು ಜಾಗೃತರಾಗಬೇಕು. ಜನರಲ್ಲಿ ಎಚ್‌ಐವಿ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ ಕೆಲಸ ಆಗಬೇಕು ಎಂದು ಜಿಲ್ಲಾಧಿಕಾರಿ ಗುರುನೀತ ತೇಜ್ ಮೆನನ್ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕಗಳ ಆಶ್ರಯದಲ್ಲಿ ಬುಧವಾರ ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಎಚ್‌ಐವಿ ತಡೆ ಮತ್ತು ಕಳಂಕ ತಾರತಮ್ಯವನ್ನು ಕಡಿಮೆಗೊಳಿಸುವಲ್ಲಿ ಇಲಾಖೆಗಳ ಪಾತ್ರದ ಕುರಿತು ಏರ್ಪಡಿಸಿದ್ದ ಸಮಾಲೋಚನಾ ಕಾರ್ಯಾಗಾರ ಉದ್ಪಾಟಿಸಿ ಅವರು ಮಾತನಾಡಿದರು.ಮನುಷ್ಯನಿಗೆ ಎಚ್‌ಐವಿ ಇದೆ ಎಂದರೆ ನಾವು ಯಾರ ಹತ್ತಿರ ಹೇಳಲ್ಲ. ಹಾಗೆ ಹೇಳಿದರೆ ತಮ್ಮನ್ನು ಜನರು ಕೀಳು ದೃಷ್ಟಿಯಿಂದ ನೋಡುತ್ತಾರೆ ಎಂಬ ಭಯ ಆವರಿಸುತ್ತದೆ, ನಮನ್ನು ಯಾರೂ ಮುಟ್ಟಿಸಿಕೊಳ್ಳುವುದಿಲ್ಲ ಎಂದು ತಿಳಿಯುತ್ತೇವೆ. ಇಂತಹ ಕಾರ್ಯಾಗಾರ ತಾಲ್ಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿ ಹಮ್ಮಿಕೊಂಡರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನಾಗರಿಕರಿಗೆ ಜಾಗೃತಿ ಮೂಡಿಸಬಹುದು ಎಂದು ಅಭಿಪ್ರಾಯಪಟ್ಟರು. ಎಚ್‌ಐವಿ ಕುರಿತು ಜನರಲ್ಲಿ ಕೆಲ ತಪ್ಪು ಕಲ್ಪನೆಗಳಿದ್ದು, ಇದರಿಂದ ಎಚ್‌ಐವಿ ಪೀಡಿತರು ಸಮಾಜದಿಂದ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದ್ದಾರೆ ಎಂದ ಅವರು, ಎಚ್‌ಐವಿ ತಡೆಗೆ ಸರ್ಕಾರ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾರ್ವಜನಿಕರು ಜಾಗೃತರಾಗಬೇಕು ಎಂದು ತಿಳಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲಿಕಾರ್ಜುನ ಮುಕ್ಕಾ ಮಾತನಾಡಿ, ಎಚ್‌ಐವಿ ಸೋಂಕು ಮುಕ್ತ ಮಾಡಲು ಔಷಧೋಪಚಾರಗಳಿಲ್ಲ. ಕರ್ನಾಟಕದಲ್ಲಿ ಈ ರೋಗ 1988 ಪ್ರಾರಂಭವಾಯಿತು. ಯಾದಗಿರಿ ಜಿಲ್ಲೆಯಲ್ಲಿ 304 ಪ್ರಕರಣಗಳಿದ್ದು, ಅದರಲ್ಲಿ ಮೃತಪಟ್ಟವರೂ ಇದ್ದಾರೆ. ಜಿಲ್ಲೆಯಲ್ಲಿ ಎಚ್‌ಐವಿ ತಪಾಸಣೆ ಮಾಡಿಸಿಕೊಳ್ಳಲು ಆಸ್ಪತ್ರೆಗಳಿವೆ ಎಂದರು.ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸಿರುವ ಅಧಿಕಾರಿಗಳು ತಮ್ಮ ಸಿಬ್ಬಂದಿ ವರ್ಗದವರಿಗೆ ಎಚ್‌ಐವಿ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ಮಾಡಿದರು.ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಿದ್ರಾಮ ಹೊನ್ಕಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಾ ಗಾರದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.