ಎಚ್ಐವಿ ಸೋಂಕಿತರಿಗೆ ಮಾನಸಿಕ ಸ್ಥೈರ್ಯ ತುಂಬಿ

ಬೆಂಗಳೂರು: ‘ಎಚ್ಐವಿ ಸೋಂಕಿತರಿಗೆ ಮಾನಸಿಕ ಸ್ಥೈರ್ಯ ತುಂಬಬೇಕಾದ ಅಗತ್ಯವಿದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ಎಂ.ತಿಮ್ಮಪ್ಪರೆಡ್ಡಿ ಹೇಳಿದರು.
ಕರ್ನಾಟಕ ರಾಜ್ಯ ಎಚ್ಐವಿ ಸೋಂಕಿತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ 5ನೇ ಸದ್ಭಾವನ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಚ್ಐವಿ ಸೋಂಕು ತಗುಲಿದೆ ಎಂದು ತಿಳಿದ ನಂತರ ಸೋಂಕಿತರು ಮಾನಸಿಕವಾಗಿ ಕುಗ್ಗುತ್ತಾರೆ. ಆದ್ದರಿಂದ ಕುಟುಂಬದ ಸದಸ್ಯರು ಅವರಲ್ಲಿ ಧೈರ್ಯ ತುಂಬಬೇಕು. ಸಮಾಜದಲ್ಲಿ ಅವರನ್ನು ಸಹಜ ವ್ಯಕ್ತಿಗಳಂತೆ ಕಾಣಬೇಕು ಎಂದು ಹೇಳಿದರು.
ಸಂಘದ ಅಧ್ಯಕ್ಷ ವಿ.ಎ.ನಾಗರಾಜು ಮಾತನಾಡಿ, ಎಚ್ಐವಿ ಸೋಂಕಿತರಿಗೆ ಎಆರ್ಟಿ ಸೆಂಟರ್ನಲ್ಲಿ ಪೌಷ್ಟಿಕ ಆಹಾರ ನೀಡಬೇಕು. ಆಸ್ಪತ್ರೆ ಗಳಲ್ಲಿ ದಾಖಲಾಗುವ ರೋಗಿಗಳಿಗೆ ಉಚಿತ ಔಷಧಿಗಳನ್ನು ವಿತರಿಸಬೇಕು ಎಂದರು.
ಸ್ವ–ಉದ್ಯೋಗ ಮಾಡಲು ಇಚ್ಛಿಸುವವರಿಗೆ ₨1 ಲಕ್ಷ ಸಾಲ ನೀಡಬೇಕು. ಸೋಂಕಿತರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.