ಸೋಮವಾರ, ಮೇ 17, 2021
25 °C

ಎಚ್‌ಡಿಕೆ ದಂಪತಿ ಕೋರ್ಟ್‌ಗೆ ಹಾಜರ್, ಸೆ 24ಕ್ಕೆ ಪ್ರಕರಣ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಬೆಂಗಳೂರು: ವಕೀಲ ವಿನೋದ್‌ಕುಮಾರ್ ದಾಖಲಿಸಿರುವ ಖಾಸಗಿ ದೂರಿನ ವಿಚಾರಣೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಕೊನೆಗೂ ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾದರು.ನಂತರ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸುಧೀಂದ್ರರಾವ್ ಅವರು, ಪ್ರಕರಣದ ವಿಚಾರಣೆಯನ್ನು ಸೆ. 24ಕ್ಕೆ ಮುಂದೂಡಿದರು.ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾಗ ಜಂತಕಲ್ ಗಣಿ ಕಂಪೆನಿಗೆ ಕಾನೂನು ಬಾಹಿರವಾಗಿ ಗಣಿ ಗುತ್ತಿಗೆ ನವೀಕರಣಕ್ಕೆ ಶಿಫಾರಸು ಮಾಡಿರುವುದು ಮತ್ತು ಜೊತೆಗೆ ಪಕ್ಷಪಾತದಿಂದ ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಭೂಮಿ ಮಂಜೂರು ಮಾಡಿ ಪ್ರತಿಯಾಗಿ ಅನಿತಾ ಕುಮಾರ ಸ್ವಾಮಿ ಅವರ ಹೆಸರಿನಲ್ಲಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ವಕೀಲ ವಿನೋದ್‌ಕುಮಾರ್ ಅವರು, ಅವರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು

ಈ ಹಿಂದೆ ಎರಡು ಬಾರಿಯೂ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಕೈಗೆತ್ತಿಕೊಂಡಾಗ ಕುಮಾರಸ್ವಾಮಿ ದಂಪತಿ ನ್ಯಾಯಾಲಯದಿಂದ ದೂರ ಉಳಿದಿದ್ದರು. ಖುದ್ದು ಹಾಜರಾದರೆ ಎಲ್ಲಿ ಬಂಧನಕ್ಕೊಳಗಾಗ ಬೇಕಾಗಬಹುದು ಎಂಬ ಆತಂಕದಿಂದ ಅವರು ಹೈಕೋರ್ಟ್ ಬಾಗಿಲು ತಟ್ಟಿದ್ದರು. ಗುರುವಾರ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್, ಶುಕ್ರವಾರ ಲೋಕಾಯುಕ್ತರ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಿರಬೇಕು ಎಂದು ಸೂಚಿಸಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.