ಬೆಂಗಳೂರು : ಜಂತಕಲ್ ಮೈನಿಂಗ್ ಕಂಪೆನಿಗೆ ಗಣಿ ಗುತ್ತಿಗೆ ಲೈಸೆನ್ಸ್ ನೀಡುವಲ್ಲಿ ಮತ್ತು ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಭೂಮಿ ಮಂಜೂರು ಮಾಡಿವಲ್ಲಿ ಅಕ್ರಮ ಎಸಗಿರುವ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಮತ್ತು ಅವರ ಪತ್ನಿ ಸೋಮವಾರವೂ ಖುದ್ದು ಹಾಜರಾಗಲಿಲ್ಲ. ಹೀಗಾಗಿ ಅವರು ನ್ಯಾಯಾಲಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ವಕೀಲರಾದ ವಿನೋದ್ಕುಮಾರ್ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆ ಆರಂಭಿಸಿರುವ `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ~ (ಲೋಕಾಯುಕ್ತ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್. ಕೆ.ಸುಧೀಂದ್ರ ರಾವ್, ಆಗಸ್ಟ್ 30ರಂದು ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದರು. ಅನಾರೋಗ್ಯದ ಕಾರಣ ನೀಡಿ ಅಂದು ಇಬ್ಬರೂ ವಿಚಾರಣೆಗೆ ಹಾಜರಾಗಿರಲಿಲ್ಲ.

ಆಗ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿ ಅಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ತಿಳಿಸಿತ್ತು

ಎಚ್ಡಿಕೆ ದಂಪತಿ ಸೋಮವಾರವೂ ಸಹ ಅನಾರೋಗ್ಯದ ಕಾರಣ ನೀಡಿದ್ದು, ಖುದ್ದು ಹಾಜರಾತಿಯಿಂದ ಎರಡು ವಾರಗಳ ವಿನಾಯಿತಿ ಕೋರಿ ತಮ್ಮ ವಕೀಲರ ಮೂಲಕವಾಗಿ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು. ಈ ಮನವಿಗೆ ತೀವ್ರವಾಗಿ ಪ್ರತಿಕ್ರಿಯಿಸಿರುವ ನ್ಯಾಯಾಲಯ ಆಪಾದಿತರು ನ್ಯಾಯಲಯಕ್ಕೆ ಗಡವು ನೀಡುವಂತಿಲ್ಲ ಎಂದು ಎಚ್ಚರಿಸಿದೆ. ಜೊತೆಗೆ ಸೆ 7ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಇದೇ ಸಮಯದಲ್ಲಿ ಎಚ್ಡಿಕೆ ದಂಪತಿ ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.