ಭಾನುವಾರ, ಮೇ 9, 2021
19 °C

ಎಚ್1ಎನ್1 ತಡೆಗೆ ಮುಂಜಾಗ್ರತಾ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ನಗರದಲ್ಲಿ  ಎಚ್1ಎನ್1ಗೆ ಮಹಿಳೆಯೊಬ್ಬರು ಬಲಿಯಾಗಿದ್ದು, ಜಿಲ್ಲೆಯ ಕೆಲ ಭಾಗಗಳಲ್ಲಿ ಶಂಕಿತ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.ಎಚ್1ಎನ್1 ರೋಗ ನಿಯಂತ್ರಿಸುವ ಒಂದು ಸಾವಿರ ಟ್ಯಾಮಿಫ್ಲೂ ಮಾತ್ರೆಗಳನ್ನು ಸಂಗ್ರಹಿಸಡಲಾಗಿದೆ. ಪ್ರತಿ ತಾಲ್ಲೂಕಿಗೆ 100 ಮಾತ್ರೆ ವಿತರಿಸಲಾಗಿದೆ. 70 ಎನ್-95 ಮಾಸ್ಕ್ ತರಿಸಲಾಗಿದೆ. ಇನ್ನಷ್ಟು ಮಾತ್ರೆಗಳು ಹಾಗೂ ಮಾಸ್ಕ್‌ಗಳಿಗೆ ಬೇಡಿಕೆ ಸಲ್ಲಿಸಲಾಗಿದೆ.

 

ಪ್ರತಿವಾರ್ಡ್‌ಗಳಲ್ಲಿ, ತಾಲ್ಲೂಕು ಕೇಂದ್ರಗಳಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆಯಲಾಗಿದ್ದು, ಶಂಕಿತ ಪ್ರಕರಣಗಳನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ, ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಜೆ.ಎನ್. ಸರೋಜಾಬಾಯಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ರೋಗ ಲಕ್ಷಣ ಕಾಣಿಸಿಕೊಂಡವರು ನಿತ್ಯ ಬೆಳಿಗ್ಗೆ ಮತ್ತು ರಾತ್ರಿ ಮಾತ್ರೆ ಸೇವಿಸಬೇಕು. ಅವರ ಕುಟುಂಬದವರು ಮುಂಜಾಗ್ರತಾ ಕ್ರಮವಾಗಿ ಒಂದು ಮಾತ್ರೆ ಸೇವಿಸಬೇಕು. ಒಂದು ವಾರ ಟ್ಯಾಮಿಫ್ಲೂ ಸೇವಿಸಿದರೆ ರೋಗ ನಿಯಂತ್ರಣಕ್ಕೆ ಬರುತ್ತದೆ ಎಂದು ಸಲಹೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.