ಬುಧವಾರ, ನವೆಂಬರ್ 13, 2019
28 °C

ಎಡಗೈ ಉಂಗುರ ಬೆರಳಿಗೆ ಶಾಯಿ

Published:
Updated:

ಗದಗ: ಚುನಾವಣೆಯಲ್ಲಿ ಮತ ಚಲಾಯಿಸಿದವರಿಗೆ ಈ ಬಾರಿ ಎಡಗೈ ತೋರು ಬೆರಳು ಬದಲಿಗೆ, ಉಂಗುರ ಬೆರಳಿಗೆ ಶಾಯಿ (ಮಸಿ) ಹಾಕಲು ನಿರ್ಧರಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ರಾಜ್ಯದಲ್ಲಿನ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾರ್ಚ್ 7 ರಂದು ನಡೆದ ಚುನಾವಣೆಯಲ್ಲಿ ಮತದಾನ ಮಾಡಿದವರಿಗೆ ಎಡಗೈ ತೋರು ಬೆರಳಿಗೆ ಶಾಯಿ ಹಾಕಲಾಗಿತ್ತು. ಅದು ಇನ್ನೂ ಮಾಸದ ಕಾರಣ, ಈ ಬಾರಿ ಉಂಗುರ ಬೆರಳಿಗೆ ಶಾಯಿ ಹಾಕಲು ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)