ಎಡಿಇ ತಂಡಕ್ಕೆ ಗೆಲುವು

7

ಎಡಿಇ ತಂಡಕ್ಕೆ ಗೆಲುವು

Published:
Updated:

ಬೆಂಗಳೂರು: ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್ (ಎಡಿಇ) ತಂಡದವರು ಬಿಡಿಎಫ್‌ಎ ಆಶ್ರಯದಲ್ಲಿ ನಡೆಯುತ್ತಿರುವ ಸೂಪರ್ ಡಿವಿಷನ್ ಫುಟ್‌ಬಾಲ್ ಲೀಗ್ ಚಾಂಪಿಯನ್‌ಷಿಪ್‌ನ ಮಂಗಳವಾರದ ಪಂದ್ಯದಲ್ಲಿ ರೈಲು ಗಾಲಿ ಕಾರ್ಖಾನೆ (ಆರ್‌ಡಬ್ಲ್ಯು ಎಫ್) ತಂಡವನ್ನು ಸೋಲಿಸಿದರು.ರಾಜ್ಯ ಫುಟ್‌ಬಾಲ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವಿಜಯಿ ತಂಡದ ಸ್ಟೀಫನ್  22ನೇ ನಿಮಿಷದಲ್ಲಿ ಮೊದಲ ಗೋಲು ಗಳಿಸಿ ಆರಂಭಿಕ ಮುನ್ನಡೆ ತಂದುಕೊಟ್ಟರು. ಈ ತಂಡದ ಇನ್ನೊಂದು ಗೋಲನ್ನು ಅಂಟೊ ಕ್ಸೇವಿಯರ್ 36ನೇ ನಿಮಿಷದಲ್ಲಿ ಕಲೆ ಹಾಕಿದರು.ಎಜಿಒಆರ್‌ಸಿ ಹಾಗೂ ಬೆಂಗಳೂರು ಕಿಕ್ಕರ್ಸ್‌ ತಂಡಗಳ ನಡುವಿನ `ಎ' ಡಿವಿಷನ್ ಫುಟ್‌ಬಾಲ್ ಲೀಗ್ ಚಾಂಪಿಯನ್‌ಷಿಪ್‌ನ ಪಂದ್ಯವು 1-1ಗೋಲುಗಳಿಂದ ಡ್ರಾದಲ್ಲಿ ಅಂತ್ಯ ಕಂಡಿತು.ಎಜಿಒಆರ್‌ಸಿ ತಂಡದ ಪ್ರವೀಣ್ 33ನೇ ನಿಮಿಷದಲ್ಲಿ ಗೋಲು ಗಳಿಸಿ ತಂಡವನ್ನು ಗೆಲುವಿನ ಹಾದಿಗೆ ಕೊಂಡೊಯ್ದಿದ್ದರು. ಆದರೆ, ಕಿಕ್ಕರ್ಸ್‌ನ ದಯಾನಂದ 74ನೇ ನಿಮಿಷದಲ್ಲಿ ಗೋಲು ತಂದಿತ್ತು ಸೋಲಿನ ಅಪಾಯದಿಂದ ತಂಡವನ್ನು ಪಾರು ಮಾಡಿದರಲ್ಲದೇ, ಎಜಿಒಆರ್‌ಸಿ ಗೆಲುವಿನ ಆಸೆಗೆ ಅಡ್ಡಿಯಾದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry