ಎತ್ತಿನಹೊಳೆ: ಶೀಘ್ರ ಜಾರಿಗೆ ಮನವಿ

7

ಎತ್ತಿನಹೊಳೆ: ಶೀಘ್ರ ಜಾರಿಗೆ ಮನವಿ

Published:
Updated:

ದೊಡ್ಡಬಳ್ಳಾಪುರ: ಎತ್ತಿನಹೊಳೆ ಯೋಜನೆಯನ್ನು ಶೀಘ್ರ ಜಾರಿಗೊಳಿಸುವಂತೆ ಮತ್ತು ಬಯಲು ಸೀವೆುಯ ಜಿಲ್ಲೆಗಳ ಕೆರೆಗಳಿಗೆ ನೀರು ತುಂಬಿಸುವ ಡಾ.ಪರಮಶಿವಯ್ಯ ವರದಿಯನ್ನು ಪ್ರಸಕ್ತ ವರ್ಷದಿಂದಲೇ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಶಾಸಕ ಜೆ.ನರಸಿಂಹಸ್ವಾಮಿ ತಿಳಿಸಿದ್ದಾರೆ. ಗುರುವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆಯ ತೀವ್ರತೆಯನ್ನು ಅಂಕಿ ಅಂಶಗಳ ಸಮೇತ ವಿವರಿಸಲಾಗಿದೆ.ತಾಲ್ಲೂಕಿಗೆ ಅಭಿವೃದ್ಧಿ ಕೆಲಸಗಳಿಗಿಂತಲೂ ಹೆಚ್ಚಿನ ಹಣವನ್ನು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ವೆಚ್ಚ ಮಾಡಲಾಗುತ್ತಿದೆ. ಪ್ರತಿ ವರ್ಷ ರೈತರು ನೀರಿಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಸಾಲಗಾರರಾಗುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ  ಮುಖ್ಯಮಂತ್ರಿಗಳ ಹಾಗೂ ಜಲಸಂಪನ್ಮೂಲ ಸಚಿವರು ಹಾಗೂ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry