ಮಂಗಳವಾರ, ಮೇ 18, 2021
31 °C
ದೊಡ್ಡಬಳ್ಳಾಪುರದಲ್ಲಿ ಸಚಿವ ಎಂ.ವೀರಪ್ಪ ಮೊಯಿಲಿ ಭರವಸೆ

ಎತ್ತಿನ ಹೊಳೆ ಯೋಜನೆಗೆ ಜುಲೈನಲ್ಲಿ ಶಂಕುಸ್ಥಾಪನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: `ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ನೀರಿನ ಬವಣೆ ನೀಗಿಸುವ ಹಾಗೂ ಕೆರೆಗಳಲ್ಲಿ ನೀರು ತುಂಬಿಸುವ ಉದ್ದೇಶದಿಂದ ರೂಪುಗೊಂಡಿರುವ ಎತ್ತಿನ ಹೊಳೆ ಯೋಜನೆಗೆ ಜುಲೈ ತಿಂಗಳಲ್ಲಿ ಶಂಕುಸ್ಥಾಪನೆ ನಡೆಯಲಿದೆ' ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಎಂ.ವೀರಪ್ಪಮೊಯಿಲಿ ಹೇಳಿದರು.ತಾಲ್ಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ನಡೆದ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ತಾಲ್ಲೂಕಿನಲ್ಲಿ ಸಾವಿರಾರು ಅಡಿ ಕೊರೆದರೂನೀರು ದೊರೆಯುತ್ತಿಲ್ಲ. ಪಂಚಾಯಿತಿ ವ್ಯಾಪ್ತಿಯಲ್ಲಿ ಕೊಳವೆ ಬಾವಿ ಕೊರೆಸಲು ನೆರವು ನೀಡಬೇಕು ಎಂದು ಮನವಿಗಳು ಬರುತ್ತಿವೆ.ರಾಜ್ಯ ಸರ್ಕಾರ ಕುಡಿಯುವ ನೀರಿಗೆ ಆದ್ಯತೆ ನೀಡಿದ್ದು, ಹಣದ ಕೊರತೆಯಿಲ್ಲ ಎಂದು ಹೇಳಿದರು.ಜನ ಸ್ಪಂದನ ಕಾರ್ಯಕ್ರಮಗಳು ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ಪರಾಮರ್ಶಿಸಿ ಸೂಕ್ತ ಪರಿಹಾರ ಕಲ್ಪಿಸಲು ನೇರವಾಗುತ್ತದೆ. ಅರ್ಜಿ ಸಲ್ಲಿಸಿದರೆ ತಮ್ಮ ಜವಾಬ್ದಾರಿ ಮುಗಿಯಿತು ಎಂದು ಕೊಳ್ಳದೆ, ಸಮಸ್ಯೆ ಬಗೆಹರಿಯುವವರೆಗೂ ಕೆಲಸ ಮಾಡಿಸಬೇಕು. ಸಂಬಂಧಿಸಿದ ದಾಖಲೆಗಳನ್ನು ಅರ್ಜಿ ಜೊತೆಯಲ್ಲೇ ನೀಡಬೇಕು ಎಂದು ಅವರು ಸಾರ್ವಜನಿಕರಿಗೆ ತಿಳಿಸಿದರು.ಜನರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸುವಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಿದರು.ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ತಾಲ್ಲೂಕಿನ 62 ಗ್ರಾಮಗಳಲ್ಲಿ ನೀರಿಲ್ಲ. ಈಗಾಗಲೇ 22 ಕೊಳವೆ ಬಾವಿ ಕೊರೆಸಲಾಗಿದೆ. 17 ಕಾರ್ಯ ನಿರ್ವಹಿಸುತ್ತಿವೆ. ಕೊಳಚೆ ನಿರ್ಮೂಲನಾ ಮಂಡಳಿಯಿಂದ ಕೊರೆಸಲಾದ ಕೊಳವಾಬಾವಿಗಳಿಗೆ ಇನ್ನೂ ಮೋಟಾರುಗಳನ್ನು ಅಳವಡಿಸಿಲ್ಲ. ನೀರಿನ ಸಮಸ್ಯೆ ಬಗೆಹರಿಸಲು ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಚರ್ಚಿಸಲು ಸೂಚಿಸಲಾಗಿದೆ ಎಂದರು.ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಅಗತ್ಯ ಸಿಬ್ಬಂದಿ ತಾಲ್ಲೂಕಿನ ಸಾಸಲು ಹೋಬಳಿಯಲ್ಲಿ ಪದವಿ ಪೂರ್ವ ಕಾಲೇಜು, ನಗರದಲ್ಲಿ ಮಹಿಳಾ ಕಾಲೇಜು, ದೊಡ್ಡಬೆಳವಂಗಲದಲ್ಲಿ ಪದವಿ ಕಾಲೇಜಿನ ನಿರ್ಮಾಣದ ಅವಶ್ಯಕತೆಯಿದೆ. ಇದಕ್ಕೆ ಅನುದಾನ ನೀಡುವಂತೆ ಹಾಗೂ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನಿರ್ಮಿಸಿರುವ ಗ್ರಾಮೀಣ ಪ್ರದೇಶದ ರಸ್ತೆಗಳನ್ನು ಸರಿಪಡಿಸುವಂತೆ ಮೊಯಿಲಿ ಅವರಿಗೆ ಮನವಿ ಮಾಡಿದರು.ವಸತಿ, ನೀರು ಮತ್ತಿತರೆ ವಿಷಯಗಳಿಗೆ ಸಂಬಂಧಿಸಿದಂತೆ ಗ್ರಾಮಸ್ಥರು ಅಹವಾಲುಗಳನ್ನು ಸಲ್ಲಿಸಿದರು. ಕೆಸ್ತೂರು, ಹುಲಿಕುಂಟೆ ಹಾಗೂ ಮಜರಾಹೊಸಹಳ್ಳಿ ಗ್ರಾಮಗಳಲ್ಲಿ ಜನಸ್ಪಂದನ ಸಭೆ ನಡೆಯಿತು.ಸಭೆಯಲ್ಲಿ ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ತಾಪಂ ಅಧ್ಯಕ್ಷ ಡಿ.ನಾಗರಾಜು,ಉಪಾಧ್ಯಕ್ಷ ಕೆ.ಯಲ್ಲಪ್ಪ, ಜಿ.ಪಂ. ಸದಸ್ಯೆ ಕಲ್ಪನಾ, ಜಿ.ಪಂ ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣ ಗೌಡ, ಕೊಡಿಗೆಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಚಂದ್ರಕಲಾ, ಉಪಾಧ್ಯಕ್ಷೆ ಹನುಮಕ್ಕ, ಜಿ.ಪಂ. ಸಿಇಓ ಕೃಷ್ಣಪ್ಪ,ತಹಶೀಲ್ದಾರ್ ಚಂದ್ರ, ತಾಲ್ಲೂಕು ಪಂಚಾಯಿತಿ ಸಿಇಓ ಎ.ಎಂ.ದ್ಯಾಮಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳುಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.