ಮಂಗಳವಾರ, ಜನವರಿ 28, 2020
18 °C

ಎತ್ತಿನ ಹೊಳೆ ಯೋಜನೆ ಅನುಷ್ಠಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: `ನಗರ ಜಿಲ್ಲೆ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ನೀರನ್ನು ಹರಿಸುವ ಎತ್ತಿನ ಹೋಳೆ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದಿಂದ ಅನುದಾನ ಮಂಜೂರು ಮಾಡಿಸಲು ಪ್ರಯತ್ನಿಸುವುದಾಗಿ ಕೇಂದ್ರ ಸಚಿವ ವೀರಪ್ಪ  ಮೊಯಿಲಿಯವರು ಭರವಸೆ ನೀಡಿರುವುದು ಸ್ವಾಗತಾರ್ಹ~ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.ಉಪನಗರದ ಬಿಬಿಎಂಪಿ ಕಚೇರಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಾಗೂ ಜೆಡಿ (ಎಸ್) ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಯಾದ ಯುವ ಕಾರ್ಯಕರ್ತರನ್ನು ಸ್ವಾಗತಿಸಿ ಅವರು ಮಾತನಾಡಿದರು.`ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮೊಯಿಲಿ ಅವರು ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ ಮಂಜೂರು ಮಾಡಿಸಬೇಕು~ ಎಂದು ಅವರು ಮನವಿ ಮಾಡಿದರು.ಯುವ ಕಾಂಗ್ರೆಸ್ ಮುಖಂಡರಾದ ಶ್ರೀಚರಣ್, ಸಿ.ಮಂಜುನಾಥ್, ಗಣೇಶ್ ಹಾಗೂ ಜೆಡಿ(ಎಸ್) ಮುಖಂಡ ಬೈಲಪ್ಪ ಸೇರಿ ಒಟ್ಟು 50 ಮಂದಿ ಬಿಜೆಪಿಗೆ ಸೇರ್ಪಡೆಯಾದರು.ಬಿಬಿಎಂಪಿ ಸದಸ್ಯರಾದ ಎಂ.ಮುನಿರಾಜು. ವೈ.ಎನ್.ಅಶ್ವತ್ಥ್, ನಗರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಯಲಹಂಕ ಕ್ಷೇತ್ರದ ಅಧ್ಯಕ್ಷ ದಿಬ್ಬೂರು ಜಯಣ್ಣ, ಮುಖಂಡರಾದ ಡಾ.ಶಶಿಕುಮಾರ್, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)