ಶುಕ್ರವಾರ, ಏಪ್ರಿಲ್ 23, 2021
24 °C

ಎದೆಹಾಲಿನಿಂದ ರೋಗ ನಿರೋಧಕ ಶಕ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನರಸಿಂಹರಾಜಪುರ: ತಾಯಿ ಎದೆ ಹಾಲು ಮಗುವಿಗೆ ಅಮೃತವಿದ್ದಂತೆ. ಇದನ್ನು ಉಣಿಸುವುದರಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಜ್ಯೋತಿಲಕ್ಷ್ಮಿ ತಿಳಿಸಿದರು.ಇಲ್ಲಿನ ಪಟ್ಟಣ ಪಂಚಾಯಿತಿ ಸಮೀ ಪದ ಅಂಗನವಾಡಿ ಕೇಂದ್ರದಲ್ಲಿ ಬುಧ ವಾರ ವಿಶ್ವಸ್ತನ್ಯ ಪಾನ ಸಪ್ತಾಹ ಸಮಾರಂಭದ ಉದ್ಘಾಟನಾ ಸಮಾ ರಂಭದಲ್ಲಿ ಅವರು ಮಾತನಾಡಿದರು.ಇದೇ 1ರಿಂದ 7ರವರೆಗೆ ವಿಶ್ವ ಸ್ತನ್ಯ ಪಾನ ಸಪ್ತಾಹ ಆಚರಿಸಲಾಗುತ್ತಿದೆ. ತಾಯಿ ಎದೆಹಾಲಿನ ಮಹತ್ವದ ಬಗ್ಗೆ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲೂ ಕಾರ್ಯಕ್ರಮ ಹಮ್ಮಿಕೊಂಡು ಕಿಶೋರಿ ಯರಿಗೆ, ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಎದೆಹಾಲಿನ ಮಹತ್ವದ ಬಗ್ಗೆ ಮಾಹಿತಿ ನೀಡಲಾಗು ವುದು.

 

ಮಗು ಹುಟ್ಟಿದ ನಂತರದಿಂದ 1ವರ್ಷದವರೆಗೂ ಎದೆ ಹಾಲು ನೀಡ ಬೇಕು. ಇದರಿಂದ ಮಗುವಿನ ಆರೋಗ್ಯ ಶಕ್ತಿ ಹೆಚ್ಚುತ್ತದೆ. ಇದೇ 3ರಂದು ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲೂ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಸುರೇಶ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲ್ಲೂಕು ವೈದ್ಯಾಧಿಕಾರಿ ಸೀಮಾ, ಅನುಸೂಯ, ಪದ್ಮ ಇದ್ದರು. ಪಟ್ಟಣದ 4 ಅಂಗನವಾಡಿ ಕೇಂದ್ರದ ಕಾರ್ಯ ಕರ್ತರು ಭಾಗವಹಿಸಿದ್ದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.