ಗುರುವಾರ , ಏಪ್ರಿಲ್ 22, 2021
25 °C

ಎನ್‌ಇಇಟಿ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮುಂದಿನ ವರ್ಷದಿಂದ ಜಾರಿಗೆ ಬರಲಿರುವ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ(ಎನ್‌ಇಇಟಿ)ಯನ್ನು ವಿರೋಧಿಸಿ ನಗರದಲ್ಲಿ ಗುರುವಾರ ಹುಬ್ಬಳ್ಳಿ ಯೂತ್ ಫೌಂಡೇಶನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಅಕ್ಷಯ ಕಾಲೊನಿಯಲ್ಲಿರುವ ಚೇತನಾ ಕಾಲೇಜಿನಿಂದ ಮೆರವಣಿಗೆ ಹೊರಟ ನೂರಾರು ವಿದ್ಯಾರ್ಥಿಗಳು ಎನ್‌ಇಇಟಿ ವಿರುದ್ಧ ಘೋಷಣೆ ಕೂಗಿದರು. ಹೊಸೂರು ವೃತ್ತ, ಚನ್ನಮ್ಮ ವೃತ್ತದ ಮೂಲಕ ಸಾಗಿದ ಮೆರವಣಿಗೆಯು ಮಿನಿ ವಿಧಾನಸೌಧದ ಎದುರು ಸಮಾವೇಶಗೊಂಡಿತು. ಈ ಎನ್‌ಇಇಟಿಯನ್ನು ಮುಂದಿನ ವರ್ಷದಿಂದ ಜಾರಿಗೆ ತರದಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಕೇಂದ್ರ ಸರ್ಕಾರದ ಸೂಚನೆಯಂತೆ ಮುಂದಿನ ವರ್ಷದಿಂದಲೇ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆ ನಡೆಸಲು ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ. ಈ ವರ್ಷ ರಾಜ್ಯದ ಪಠ್ಯಕ್ರಮದ ಅಡಿ ಶಿಕ್ಷಣ ಪಡೆಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗಲಿದೆ.ಹೀಗಾಗಿ ಎನ್‌ಇಇಟಿಯನ್ನು ಮುಂದಿನ ವರ್ಷಕ್ಕೆ ಬದಲಾಗಿ 2014ರಿಂದ ನಡೆಸಬೇಕು ಎಂದು ಒತ್ತಾಯಿಸಲಾಯಿತು. ಪದವಿಪೂರ್ವ ಕಾಲೇಜುಗಳ ವ್ಯವಸ್ಥಾಪಕ ಮಂಡಳಿಗಳು ಹಾಗೂ ಪಾಲಕರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.