ಸೋಮವಾರ, ಜೂನ್ 21, 2021
30 °C

ಎನ್‌ಎಚ್‌ಆರ್‌ಎಂ ಹಗರಣ: ಕುಶಾವ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಾಜಿಯಾಬಾದ್ (ಪಿಟಿಐ):  ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಯೋಜನೆಯ (ಎನ್‌ಎಚ್‌ಆರ್‌ಎಂ) ಬಹು ಕೋಟಿ ಹಗರಣದ ಆರೋಪಿಗಳಾದ ಉತ್ತರ ಪ್ರದೇಶದ ಮಾಜಿ ಸಚಿವ ಬಾಬು ಸಿಂಗ್ ಕುಶಾವ ಮತ್ತು ಬಿಎಸ್‌ಪಿ ಮಾಜಿ ಶಾಸಕ ರಾಮ್ ಪ್ರತಾಪ್ ಜೈಸ್ವಾಲ್ ಅವರನ್ನು ಮಂಗಳವಾರ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಮಾರ್ಚ್ 3ರಂದು ಬಂಧಿಸಲಾಗಿದ್ದ ಈ ಆರೋಪಿಗಳನ್ನು ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ಸಿಬಿಐ ನ್ಯಾಯಾಲಯವು 10 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿತ್ತು. ಈ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು 14 ದಿವಸಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.