ಎನ್‌ಎಚ್‌ಆರ್‌ಸಿಗೆ ದೂರು: ಉ.ಪ್ರ ಪ್ರಥಮ

7

ಎನ್‌ಎಚ್‌ಆರ್‌ಸಿಗೆ ದೂರು: ಉ.ಪ್ರ ಪ್ರಥಮ

Published:
Updated:

ನವದೆಹಲಿ, (ಪಿಟಿಐ): ರಾಷ್ಟ್ರೀಯ ಮಾನವ ಹಕ್ಕು ಆಯೋಗದ (ಎನ್‌ಎಚ್‌ಆರ್‌ಸಿ) 18 ವರ್ಷಗಳ ಇತಿಹಾಸದಲ್ಲಿ ದೆಹಲಿ ಮತ್ತು ಉತ್ತರ ಪ್ರದೇಶದಿಂದ ಅತ್ಯಧಿಕ ಸಂಖ್ಯೆಯಲ್ಲಿ ಮಾನವ ಹಕ್ಕು ಉಲ್ಲಂಘನೆಯ ದೂರುಗಳು ದಾಖಲಾಗಿವೆ.

ಉತ್ತರ ಪ್ರದೇಶದ ಪ್ರಕರಣಗಳಲ್ಲಿ ಪೊಲೀಸ್ ಮತ್ತು ನ್ಯಾಯಾಂಗ ಬಂಧನದ ಸಾವಿನ ಪ್ರಕರಣಗಳೇ ಅಧಿಕ ಸಂಖ್ಯೆಯಲ್ಲಿವೆ ಎಂದು ಆಯೋಗ ತಿಳಿಸಿದೆ. ಇದೇ ವೇಳೆ ದಾಖಲಾದ ಪ್ರಕರಣಗಳ ವಿಚಾರಣೆ ನಡೆಸಿ ಸುಮಾರು 51.09 ಕೋಟಿ ರೂಪಾಯಿ ಪರಿಹಾರ ನೀಡಲು ಆದೇಶಿಸಲಾಗಿದೆ ಎಂದು ತನ್ನ 19ನೇ ಸಂಸ್ಥಾಪನಾ ದಿನಾಚರಣೆಯಾದ ಬುಧವಾರ ಆಯೋಗ ಹೇಳಿಕೆ ನೀಡಿದೆ. ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ 10,94,113 ಪ್ರಕರಣಗಳು ದಾಖಲಾಗಿದ್ದು ಇದರಲ್ಲಿ 10,77,622 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಇದರಲ್ಲಿ 6,22,635 ಪ್ರಕರಣಗಳೊಂದಿಗೆ ಉತ್ತರ ಪ್ರದೇಶ ಪ್ರಥಮ ಸ್ಥಾನದಲ್ಲಿದ್ದರೆ, 69,409 ಪ್ರಕರಣಗಳೊಂದಿಗೆ ದೆಹಲಿ ಎರಡನೇ ಸ್ಥಾನದಲ್ಲಿದೆ. ಬಿಹಾರ, ಹರಿಯಾಣ, ರಾಜಸ್ತಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ತಮಿಳುನಾಡು ಮತ್ತು ಜಾರ್ಖಂಡ್ ಉಳಿದ ಸ್ಥಾನಗಳನ್ನು ಪಡೆದಿವೆ ಎಂದು ಹೇಳಿಕೆ ವಿವರಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry