ಶುಕ್ರವಾರ, ಮೇ 20, 2022
27 °C

ಎನ್‌ಎಸ್‌ಎಸ್‌ಕೆ ನೌಕರರಿಂದ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜನವಾಡ: ಕಾರ್ಖಾನೆ ನಿರ್ಮಾಣದಲ್ಲಿ ಭೂಮಿ ಕಳೆದುಕೊಂಡ ನೌಕರರನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಚೇರಿಸುವಂತೆ ಆಗ್ರಹಿಸಿ ನೌಕರರ ಸಂಘವು ಬುಧವಾರ ಬೀದರ್ ತಾಲ್ಲೂಕಿನ ಜನವಾಡ ಸಮೀಪ ಇರುವ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಿತು.ಜನವಾಡ ಪಟ್ಟಣದಿಂದ ಕಾರ್ಖಾನೆವರೆಗೆ ಮೆರವಣಿಗೆ ನಡೆಸಿ ಧರಣಿ ಕುಳಿತರು. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಡಳಿತ ಮಂಡಳಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.ಹುದ್ದೆಗೆ ಅನುಗುಣವಾಗಿ ವೇತನ, ಭತ್ಯೆ ಮತ್ತಿತರ ಸೌಲಭ್ಯ ಕೊಡಬೇಕು. ಕಾರ್ಮಿಕರಿಗೆ ಸಿಗುವ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ನೀಡಬೇಕು. ಆಕಸ್ಮಿಕ ರಜೆ, ಕಾಯಿಲೆ, ಗಳಿಕೆ ರಜೆ ಮತ್ತಿತರ ಸೌಲಭ್ಯ ಒದಗಿಸಬೇಕು. ದಿನಗೂಲಿ ನೌಕರರ ವೇತನವನ್ನು 100 ರೂಪಾಯಿಯಿಂದ 150ಕ್ಕೆ ಹೆಚ್ಚಿಸಬೇಕು. ಕಾರ್ಖಾನೆ ನಿರ್ಮಾಣದಲ್ಲಿ ಭೂಮಿ ಕಳೆದುಕೊಂಡ ಪರಿವಾರಗಳ 35 ಸದಸ್ಯರು ಸದ್ಯ ಕಾರ್ಖಾನೆಯಲ್ಲಿ ನೌಕರಿಯಲ್ಲಿದ್ದಾರೆ. ಆಡಳಿತ ಮಂಡಳಿಯ ನಿರ್ಧಾರದಂತೆ ಕೂಡಲೇ ಅವರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯ ನಿವೃತ್ತ ನೌಕರರ, ಪಿಂಚಣಿದಾರರ ಸಂಘದ ಕಾರ್ಯದರ್ಶಿ ಶಿವರಾಜ ನೇಳಗಿ ಅವರು ನೌಕರರನ್ನು ಉದ್ದೇಶಿಸಿ ಮಾತನಾಡಿದರು. ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ನೌಕರರ ಸಂಘದ ಅಧ್ಯಕ್ಷ ಮನೋಜ ಪಾಂಡ್ರೆ, ಉಪಾಧ್ಯಕ್ಷರಾದ ಶಂಕರೆ ಶಿರಾಪುರೆ, ಯಶವಂತ ಜಾಧವ, ಬಾಲಾಜಿ ಲವಟೆ ಮತ್ತಿತರ ಪದಾಧಿಕಾರಿಗಳು ಹಾಗೂ ನೌಕರರು ಧರಣಿಯಲ್ಲಿ ಪಾಲ್ಗೊಂಡಿದ್ದರು.ಎ.ಐ.ಟಿ.ಯು.ಸಿ. ಅಧ್ಯಕ್ಷ ಬಾಬುರಾವ ಹೊನ್ನಾ, ಪ್ರಮುಖರಾದ ಈಶ್ವರಪ್ಪ ಚಾಕೋತೆ, ಪ್ರಕಾಶ ಕುಶನೂರೆ ಮತ್ತಿತರರು ಗುರುವಾರ ಧರಣಿ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.