ಶನಿವಾರ, ಮೇ 8, 2021
18 °C

ಎನ್‌ಎಸ್‌ಎಸ್‌ನಿಂದ ನಾಯಕತ್ವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತರೀಕೆರೆ: ರಾಷ್ಟ್ರೀಯ ಸೇವಾ ಯೋಜನೆಯಿಂದ ವಿದ್ಯಾರ್ಥಿಗಳಲ್ಲಿ ಸಾಮೂಹಿಕ ನಾಯಕತ್ವ ಮತ್ತು ಗ್ರಾಮಾಭಿವೃದ್ಧಿ ಪರಿಕಲ್ಪನೆ  ಮೂಡಿಸುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಅಧಿಕಾರಿ ಪ್ರೊ. ಶಿವಮೂರ್ತಿ ತಿಳಿಸಿದರು.ಇಲ್ಲಿನ ಸರ್ಕಾರಿ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ  ನೂತನ ರಾಷ್ಟ್ರೀಯ ಸೇವಾ ಯೋಜನೆ  ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೆ ಪ್ರತಿ ಫಲಾಪೇಕ್ಷೆಯಿಲ್ಲದೆ ಸಮರ್ಪಣಾ ಮನೋಭಾವದಿಂದ ಯೋಜನೆಯಲ್ಲಿ ಭಾಗವಹಿಸಿದಲ್ಲಿ ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಹೋದಲು ಸಾದ್ಯ ಎಂದರು.ಕಾಲೇಜಿನ ಪ್ರಾಚಾರ್ಯ ಟಿ.ಬಿ.ಅಣ್ಣಪ್ಪ ಮಾತನಾಡಿ, ರಾಷ್ಟ್ರದಲ್ಲಿರುವ ಶೇ.75ರಷ್ಟು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ ಎಂದರು. ಉಪನ್ಯಾಸಕ ನರಸಿಂಹಮೂರ್ತಿ ಮಾತನಾಡಿ ಎನ್‌ಎಸ್‌ಎಸ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಸಮಯದ ಪ್ರಜ್ಞೆ ಮತ್ತು ಶಿಸ್ತನ್ನು ರೂಢಿ ಸಿಕೊಳ್ಳಲು ಪ್ರೇರಣೆ ನೀಡುತ್ತದೆ ಎಂದರು. ಎನ್‌ಎಸ್‌ಎಸ್ ಘಟಕದ ಮುಖ್ಯಸ್ಥ ಕೆ.ಕೃಷ್ಣಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.ವಿದ್ಯಾರ್ಥಿನಿ ಲಕ್ಷ್ಮಿಎನ್‌ಎಸ್‌ಎಸ್ ಗೀತೆ ಹಾಡಿದರು. ಉಪನ್ಯಾಸಕರಾದ ಅನ್ನಪೂರ್ಣಮ್ಮ, ಜಗದೀಶ್, ಶಿವಕುಮಾರ್ ಮು.ಂತಾದವರು ಇದ್ದರು. 

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.