ಮಂಗಳವಾರ, ಜೂನ್ 15, 2021
27 °C

ಎನ್‌ಎಸ್‌ಎಸ್ ಸಮಗ್ರ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಈ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಮಗ್ರ ಪ್ರಶಸ್ತಿಯನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ನೀಡಲಾಯಿತು.ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಇತ್ತೀಚೆಗೆ ಬೆಂಗಳೂರು ವಿವಿಯ ಎನ್‌ಎಸ್‌ಎಸ್ ಭವನದಲ್ಲಿ ಹಮ್ಮಿಕೊಂಡಿದ್ದ `ರಾಜ್ಯಮಟ್ಟದ ಯುವ ಜನೋತ್ಸವ - 2012~ ಸಮಾರೋಪ ಸಮಾರಂಭದಲ್ಲಿ, ಯುವಜನ ಸೇವಾ ಇಲಾಖೆಯ ರಾಜ್ಯ ಸಂಪರ್ಕಾಧಿಕಾರಿ ಹಾಗೂ ಜಂಟಿ ಕಾರ್ಯದರ್ಶಿ ಕೆ.ಬಿ.ಧನಂಜಯ ಅವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಮಾಡಿದರು.ಬೆಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಸುಂದರ್ ರಾಜ್ ಅರಸ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಎಂ.ವಸಂತ ಶೆಟ್ಟಿ ಸೇರಿದಂತೆ ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.