ಶನಿವಾರ, ಮೇ 15, 2021
22 °C

ಎನ್‌ಕೆಪಿ ಸಾಳ್ವೆ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ, (ಐಎಎನ್‌ಎಸ್): ಕೇಂದ್ರದ ಮಾಜಿ ಸಚಿವ ಹಾಗೂ ಕ್ರಿಕೆಟ್ ನಿಯಂತ್ರಣಾ ಮಂಡಳಿಯ ಮಾಜಿ ಅಧ್ಯಕ್ಷ ಎನ್‌ಕೆಪಿ ಸಾಳ್ವೆ (80) ಭಾನುವಾರ ಮುಂಜಾನೆ ಆಸ್ಪತ್ರೆಯಲ್ಲಿ ನಿಧನರಾದರು.



ಮೃತರು 1982-85ರ ಅವಧಿಯಲ್ಲಿ ಕ್ರಿಕೆಟ್ ನಿಯಂತ್ರಣಾ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. 1998-99ರಲ್ಲಿ ಇವರ ಹೆಸರಿನಲ್ಲಿಯೇ ~ಎನ್‌ಕೆಪಿ ಸಾಳ್ವೆ ಚಾಲೆಂಜರ್ ಟ್ರೋಫಿ  ಕ್ರಿಕೆಟ್ ಟೂರ್ನಿ~ಯನ್ನು ಆರಂಭಿಸಲಾಗಿತ್ತು.



ಸಾಳ್ವೆ ಅವರು ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಗಳಿಂದ ನರಳುತ್ತಿದ್ದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಮೃತರು ಮಗ ಹರೀಶ್ ಮತ್ತು ಮಗಳು ಅರುಂಧತಿ ಅವರನ್ನು ಅಗಲಿದ್ದಾರೆ.



ಮೃತರ ದೇಹವನ್ನು ಭಾನುವಾರ ರಾತ್ರಿ ನವದೆಹಲಿಯಿಂದ ನಾಗಪುರಕ್ಕೆ ತೆಗೆದುಕೊಂಡು ಹೋಗಲಾಗುವುದು. ಸೋಮವಾರ ಅಂತ್ಯಕ್ರಿಯೆ ಮಾಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.