ಶುಕ್ರವಾರ, ಫೆಬ್ರವರಿ 26, 2021
29 °C

ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರ ಬಲಿ

ರಾಯ್‌ಪುರ(ಪಿಟಿಐ): ಛತ್ತೀಸಗಡದ ದಾಂತೆವಾಡ ಜಿಲ್ಲೆಯ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿ ಶುಕ್ರವಾರ ಬೆಳಿಗ್ಗೆ ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಮಹಿಳೆ ಸೇರಿದಂತೆ ಮೂವರು ನಕ್ಸಲರು ಬಲಿಯಾಗಿದ್ದಾರೆ.ಜಿಲ್ಲಾ ಮೀಸಲು ಪೊಲೀಸ್ ಪಡೆಯ ತಂಡ ಅರಣ್ಯ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದು, ಬೆಳಗಿನ ಜಾವ ನಡೆಸಿದ ಎನ್‌ಕೌಂಟರ್‌ನಲ್ಲಿ ನಕ್ಸಲರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಹಿಳೆಯ ಮೃತ ದೇಹ ಸೇರಿದಂತೆ ಮೂವರ ಶವಗಳನ್ನು ವಶಕ್ಕೆ ಪಡೆಯಲಾಗಿದ್ದು, ಘಟನಾ ಸ್ಥಳದಲ್ಲಿ ನಕ್ಸಲರು ಹೊಂದಿದ್ದ ರೈಫಲ್‌, ಗನ್‌, ಕೆಲವು ನಿತ್ಯ ಬಳಕೆ ವಸ್ತುಗಳು ಲಭ್ಯವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.