ಶುಕ್ರವಾರ, ಮೇ 7, 2021
24 °C

ಎನ್‌ಡಿಎಯಿಂದ ಹೊರ ಬರುವ ಸುಳಿವು ನೀಡಿದ ಜೆಡಿಯು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಟ್ನಾ (ಪಿಟಿಐ):  ಸಂಯುಕ್ತ ಜನತಾ ಪಕ್ಷವು (ಜೆಡಿಯು)  ಎನ್‌ಡಿಎ ಮೈತ್ರಿ ಕೂಟದಿಂದ ಹೊರಬರುವ ಸುಳಿವು  ನೀಡಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಪಟ್ನಾದಲ್ಲಿ ಮಾತನಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿಯಲ್ಲಿನ ಪ್ರಸ್ತುತ ಬೆಳವಣಿಗೆಗಳನ್ನು  ಗಮನಿಸಿದರೆ ಎನ್‌ಡಿಎ ಮೈತ್ರಿ ಕೂಟದಿಂದ ಹೊರಬರುವುದೇ ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ಅಭಿಪ್ರಾಯವನ್ನು ಪಕ್ಷದ ವರಿಷ್ಠರಾದ ಶರದ್ ಯಾದವ್ ಕೂಡ ಹೊಂದಿದ್ದಾರೆ ಎಂದು ನಿತೀಶ್ ತಿಳಿಸಿದರು.ಪಕ್ಷ ಈವರೆಗೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ನಾಳೆಯಿಂದ ಆರಂಭವಾಗಲಿರುವ ಎರಡು ದಿನಗಳ ಪಕ್ಷದ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ನಿತೀಶ್ ಕುಮಾರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.