ಚಿಕ್ಕಬಳ್ಳಾಪುರ: ಬಿಹಾರ್ ಮಾದರಿಯಲ್ಲೇ ನಮ್ಮ ರಾಜ್ಯದಲ್ಲೂ ಸಿಪಿಐ ಜತೆ ಹೊಂದಾಣಿಕೆ ಮಾಡಿಕೊಂಡಿದ್ದು, ಹತ್ತು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದೇವೆ ಎಂದು ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ.ಪಿ.ನಾಡಗೌಡ ತಿಳಿಸಿದರು.

ನಗರಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ತೃತೀಯ ರಂಗ ಇರದ ಹಿನ್ನೆಲೆಯಲ್ಲಿ ಸದ್ಯಕ್ಕೆ ಸಿಪಿಐ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ನಮ್ಮ ಎರಡೂ ಪಕ್ಷಗಳ ಕಾರ್ಯಕರ್ತರು ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ ಎಂದರು.

ಸಿಪಿಐ ಅಭ್ಯರ್ಥಿಗಳು ಕಣಕ್ಕೆ ಇಳಿದಿರುವ ಕ್ಷೇತ್ರಗಳನ್ನು ಹೊರತುಪಡಿಸಿ ಇತರೆ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಸಿಪಿಐ ಅಭ್ಯರ್ಥಿಗಳು ಸ್ಪರ್ಧಿಸುವ ಕಡೆ ಜೆಡಿಯು ಕಾರ್ಯಕರ್ತರು ಮತ್ತು ಜೆಡಿಯು ಅಭ್ಯರ್ಥಿಗಳು ಕಣಕ್ಕೆ ಇಳಿದಿರುವ ಕಡೆ ಸಿಪಿಐ ಕಾರ್ಯಕರ್ತರು ಬೆಂಬಲ ಮತ್ತು ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ನಾವು ಪ್ರಚಾರ ಆರಂಭಿಸಿದ್ದೇವೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ನೇತೃತ್ವದ ಯುಪಿಎ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವನ್ನು ಕಟುವಾಗಿ ಟೀಕಿಸಿದ ಅವರು, ಎರಡೂ ಮೈತ್ರಿಕೂಟಗಳು ಕೇಂದ್ರದಲ್ಲಿ ಅಧಿಕಾರ ನಡೆಸಿವೆಯಾದರೂ ಜನಪರ ಯೋಜನೆಗಳನ್ನು ರೂಪಿಸುವಲ್ಲಿ, ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿವೆ. ಭ್ರಷ್ಟಾಚಾರ ಮತ್ತು ಹಗರಣದಲ್ಲಿ ಭಾಗಿಯಾಗಿರುವ ಈ ಮೈತ್ರಿಕೂಟಗಳ ಬಗ್ಗೆ ಜನರು ನಂಬಿಕೆ ಮತ್ತು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂದರು.

ಕೇಂದ್ರದಲ್ಲಿ ಈ ಬಾರಿ ಯಾವುದೇ ಪಕ್ಷಕ್ಕೆ ಸಂಪೂರ್ಣ ಬಹುಮತ ಬರುವುದಿಲ್ಲ ಎಂದು ಭವಿಷ್ಯ ನುಡಿದ ಅವರು, ಸಂಪೂರ್ಣ ಬಹುಮತ ಗಳಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಬಾಹ್ಯವಾಗಿ ಬೆಂಬಲ ವ್ಯಕ್ತಪಡಿಸಲಿವೆ. ಎರಡೂ ಪಕ್ಷಗಳ ದೋರಣೆಗಳ ಬಗ್ಗೆ ಅರಿತಿರುವ ಜನರು ಎಲ್ಲವನ್ನೂ ಆಲೋಚಿಸಿಯೇ ಮತ ಚಲಾಯಿಸುತ್ತಾರೆ ಎಂದು ತಿಳಿಸಿದರು.

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರ ಅಲೆ ಎಲ್ಲೆಡೆ ಇದೆಯೆಂದು ಭ್ರಮೆ ಹುಟ್ಟಿಸಲಾಗುತ್ತಿದೆ. ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಮಾತ್ರವೇ ಮೋದಿ ಅಲೆ ಇದ್ದು, ದಕ್ಷಿಣದಲ್ಲಿ ಅದರ ಗಂಧಗಾಳಿಯೂ ಇಲ್ಲ ಎಂದರು.

ಜಿ.ಕೆ.ಸಿ.ರೆಡ್ಡಿ ನಾಮಪತ್ರ ಸಲ್ಲಿಕೆ

ಚಿಕ್ಕಬಳ್ಳಾಪುರ: ಲೋಕಸಭಾ ಕ್ಷೇತ್ರದ ಜೆಡಿಯು ಅಭ್ಯರ್ಥಿಯಾಗಿ ಜಿ.ಕೆ.ಸಿ.ರೆಡ್ಡಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಅವರೊಂದಿಗೆ ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ.ಪಿ.ನಾಡಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಕೆ.ವಿ.ಸದಾಶಿವಯ್ಯ, ಮುಖಂಡರಾದ ಎಂ.ಎಲ್.ಅನುಪಮಾ ರೆಡ್ಡಿ ಮತ್ತು ಮುತ್ತುಕುಮಾರ್ ತೆರಳಿ ಚುನಾವಣಾಧಿಕಾರಿ ಸತ್ಯಭಾಮಾ ಅವರಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರ ಜೊತೆ ಜಿ.ಕೆ.ಸಿ.ರೆಡ್ಡಿ ಮಾತನಾಡಿ, ಬಯಲುಸೀಮೆ ಸೇರಿದಂತೆ ರಾಜ್ಯದಲ್ಲಿ ನೀರಿನ ಸಮಸ್ಯೆ ಬಗೆಹರಿಯಬೇಕಿದ್ದರೆ ನದಿಗಳ ಜೋಡಣೆಯಾಗಬೇಕು. ತುಂಗಾ, ಭದ್ರಾ ಮತ್ತು ಶರಾವತಿ ನದಿಗಳನ್ನು ಜೋಡಣೆ ಮಾಡಿ ನೀರು ಹರಿಸಿದಲ್ಲಿ ಬಯಲುಸೀಮೆ ಪ್ರದೇಶದಲ್ಲಿನ ನೀರಾವರಿ ಸಮಸ್ಯೆ ಖಂಡಿತವಾಗಿಯೂ ನಿವಾರಣೆಯಾಗುತ್ತದೆ. ನದಿಗಳ ಜೋಡಣೆಗಾಗಿ ಜೆಡಿಯು ಹೋರಾಡಲಿದೆ ಎಂದರು.

ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯಿಲಿ ಕೇಂದ್ರದಲ್ಲಿ ಸಚಿವರಾಗಿದ್ದರೂ ಜನರ ಪರವಾಗಿ ಯಾವುದೇ ರೀತಿಯ ಉಪಯುಕ್ತ ಕೆಲಸಗಳನ್ನು ಮಾಡಿಲ್ಲ. ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಅವರು ಭೂಕಬಳಿಕೆ ಆರೋಪ ಎದುರಿಸುತ್ತಿದ್ದು, ಜನರ ಪರವಾಗಿ ಕಾಳಜಿ ಅಥವಾ ಕಳಕಳಿಯಿಲ್ಲ ಎಂದರು.

ನಾನು ಹಲವಾರು ವರ್ಷಗಳಿಂದ ರೈತ ಚಳವಳಿ, ಸಮಾಜವಾದಿ ಚಳವಳಿ ಮುಂತಾದವುಗಳಲ್ಲಿ ತೊಡಗಿಸಿಕೊಂಡು ಬಂದಿದ್ದೇನೆ. ಕ್ಷೇತ್ರದ ಅಭ್ಯರ್ಥಿಯಾಗಿ ಜನರ ಸಮಸ್ಯೆಗಳನ್ನು ಅರಿತು ಅವುಗಳನ್ನು ನಿವಾರಿಸುವ ಪ್ರಯತ್ನ ಮಾಡುತ್ತೇನೆ ಎಂದು ಅವರು ತಿಳಿಸಿದರು.

*ಪತ್ನಿಯೇ ಶ್ರೀಮಂತೆ!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.