ಎನ್‌ಸಿಇಆರ್‌ಟಿ: 64 ವಿದ್ಯಾರ್ಥಿಗಳಿಗೆ ಶಿಷ್ಯ ವೇತನ

7

ಎನ್‌ಸಿಇಆರ್‌ಟಿ: 64 ವಿದ್ಯಾರ್ಥಿಗಳಿಗೆ ಶಿಷ್ಯ ವೇತನ

Published:
Updated:

ಬೆಂಗಳೂರು: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಹಾಗೂ ತರಬೇತಿ ಪರಿಷತ್‌ (ಎನ್‌ಸಿಇಆರ್‌ಟಿ) ವತಿ ಯಿಂದ ನಗರದಲ್ಲಿ ನಡೆದ ಪರೀಕ್ಷೆ ಯಲ್ಲಿ ಹಾಜರಾದ 140 ವಿದ್ಯಾರ್ಥಿ ಗಳು ರಾಷ್ಟ್ರೀಯ ಪ್ರತಿಭಾ ಶೋಧ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಈ ಪೈಕಿ 64 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆದಿದ್ದಾರೆ.ಪರೀಕ್ಷೆ ಮೇ ತಿಂಗಳಿನಲ್ಲಿ ನಡೆ ಯಿತು. ವಿದ್ಯಾರ್ಥಿಗಳು ₨ 6,000 ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ. ನವೆಂಬರ್‌ ತಿಂಗಳಿನಲ್ಲಿ ರಾಜ್ಯ ಮಟ್ಟದ ಪರೀಕ್ಷೆ ನಡೆದಿತ್ತು. ರಾಜ್ಯದಿಂದ 40 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರಲ್ಲಿ 223 ಮಂದಿ ರಾಷ್ಟ್ರೀಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದರು. ಬಳಿಕ ಎನ್‌ಟಿಸಿಇ ಪ್ರತಿಭೆ ಗುರುತಿಸುವ ಪರೀಕ್ಷೆ ನಡೆಸಿತು. ಈ ಪರೀಕ್ಷೆ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆದಿತ್ತು. ಇದನ್ನು ಎನ್‌ಸಿಇಆರ್‌ಟಿ ರದ್ದುಗೊಳಿಸಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿತ್ತು.ವಿದ್ಯಾರ್ಥಿಗಳ ಪೈಕಿ ಪ್ರೀತಮ್‌ ಉಪಾಧ್ಯಾಯ ರಾಷ್ಟ್ರೀಯ ಮಟ್ಟದಲ್ಲಿ ಏಳನೇ ಹಾಗೂ ರಾಜ್ಯಕ್ಕೆ ಎರಡನೇ ಸ್ಥಾನ, ಪಾರ್ಥ ಕದಂಬಿ ಅವರು ರಾಷ್ಟ್ರೀಯ ಮಟ್ಟದಲ್ಲಿ 50 ಹಾಗೂ ರಾಜ್ಯಕ್ಕೆ ಐದನೇ ರ್‍ಯಾಂಕ್‌ ಗಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry