ಎನ್‌ಸಿಟಿಸಿ: ಅಭಿಪ್ರಾಯ ಪಡೆಯಲು ಆಗ್ರಹ

7

ಎನ್‌ಸಿಟಿಸಿ: ಅಭಿಪ್ರಾಯ ಪಡೆಯಲು ಆಗ್ರಹ

Published:
Updated:

ಬೆಂಗಳೂರು: ರಾಷ್ಟ್ರೀಯ ಭಯೋ ತ್ಪಾದನಾ ನಿಗ್ರಹ ಕೇಂದ್ರ (ಎನ್‌ಸಿಟಿಸಿ) ಸ್ಥಾಪಿಸುವ ಕೇಂದ್ರದ ಕ್ರಮ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟುಮಾಡಲಿದ್ದು, ಅನುಷ್ಠಾನಗೊಳಿಸುವ ಮುನ್ನ ರಾಜ್ಯಗಳ ಅಭಿಪ್ರಾಯ ಪಡೆಯಬೇಕು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಒತ್ತಾಯಿಸಿದ್ದಾರೆ.ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಅವರಿಗೆ ಈ ಕುರಿತು ಪತ್ರ ಬರೆದಿರುವ ಅವರು, ಮಾರ್ಚ್ 1ರಂದು ಎನ್‌ಸಿಟಿ ಸಿಗೆ ಚಾಲನೆ ನೀಡುವುದನ್ನು ಮುಂದೂ ಡಬೇಕು. ಆದಷ್ಟು ಬೇಗ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ಕರೆದು ಈ ಬಗ್ಗೆ ಚರ್ಚಿಸಬೇಕು ಎಂದು ಆಗ್ರಹಿ ಸಿದ್ದಾರೆ.ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಎನ್‌ಸಿಟಿಸಿಗೆ ವಿರೋಧ ವ್ಯಕ್ತಪಡಿ ಸಿದ್ದಾರೆ. ಹೀಗಾಗಿ ರಾಷ್ಟ್ರೀಯ ಭದ್ರತಾ ಮಂಡಳಿಯ ಸಭೆ ಕರೆದು ಈ ಬಗ್ಗೆ ವಿವರವಾಗಿ ಚರ್ಚಿಸಬೇಕು. ಇದು ಅತ್ಯಂತ ಪ್ರಮುಖವಾಗಿದ್ದು, ಕೇಂದ್ರ ಸರ್ಕಾರ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆ ದುಕೊಳ್ಳದೆ ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಂಡಿರುವುದು ಸರಿ ಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry