ಶನಿವಾರ, ಮೇ 15, 2021
22 °C

ಎನ್‌ಸಿಟಿಸಿ: ಮೇ 5 ರಂದು ಸಿಎಂ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್):  ಕಾಂಗ್ರೆಸ್ಸೇತರ ರಾಜ್ಯ ಸರ್ಕಾರಗಳ ಬೇಡಿಕೆಗೆ ಮಣಿದಿರುವ ಕೇಂದ್ರ ಸರ್ಕಾರ, ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರ (ಎನ್‌ಸಿಟಿಸಿ) ಸ್ಥಾಪನೆ ಕುರಿತಂತೆ ಮೇ ಐದರಂದು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ನಿರ್ಧರಿಸಿದೆ.

ಗೃಹ ಸಚಿವ ಪಿ. ಚಿದಂಬರಂ ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಈ ಸಂಬಂಧ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

`ನಾನು ಎಲ್ಲಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ. ಈ ಸಭೆಯಲ್ಲಿ ತಮ್ಮ ಭಾಗವಹಿಸುವಿಕೆಯನ್ನು ಎಲ್ಲ ಮುಖ್ಯಮಂತ್ರಿಗಳು ದೃಢಪಡಿಸುತ್ತಾರೆ ಎಂಬ ವಿಶ್ವಾಸವಿದೆ. ಏಪ್ರಿಲ್ 16ರಂದು ನಡೆಯಲಿರುವ ಮುಖ್ಯಮಂತ್ರಿಗಳ ಸಭೆಯಲ್ಲಿ ಈಗಾಗಲೇ ಸಿದ್ಧ ಪಡಿಸಿರುವ ಕಾರ್ಯಸೂಚಿಗಳ ಕುರಿತು ಚರ್ಚಿಸಲಾಗುವುದು. ಎನ್‌ಸಿಟಿಸಿ ಬಗ್ಗೆ ಮೇ 5ರಂದು ಚರ್ಚಿಸಲಿದ್ದೇವೆ~ ಎಂದು ಚಿದಂಬರಂ ಹೇಳಿದರು.

ವಾರ್ಷಿಕವಾಗಿ ನಡೆಯುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯು 16ರಂದು ನವದೆಹಲಿಯಲ್ಲಿ ನಡೆಯಲಿದೆ.

ಎನ್‌ಸಿಟಿಸಿ ವಿಚಾರ ಚರ್ಚಿಸಲು ಪ್ರತ್ಯೇಕವಾಗಿ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಪ್ರಧಾನಿ ಮನಮೋಹನ್‌ಸಿಂಗ್ ಅವರಿಗೆ ಪತ್ರ ಬರೆದು ತಿಳಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.